
ಕಲಾ ಸಾಮ್ರಾಟ್ ಎಸ್. ನಾರಾಯಣ್ ನಿರ್ದೇಶನದ ಆದಿತ್ಯ ನಟನೆಯ ‘5ಡಿ’ ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಅನ್ನು ರಿಲೀಸ್ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಅನ್ನು ರಿಲೀಸ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಿನಿಮಾ ಶೂಟಿಂಗ್ ಈಗಾಗಲೇ ಪುನಾರಂಭ ಮಾಡಿದ್ದಾರೆ.
ದೀಪಿಕಾ ಪಡುಕೋಣೆ ಹಿಂದಿಕ್ಕಿ ನೇಹಾ ಕಕ್ಕರ್ ಮಾಡಿದ್ದಾರೆ ಈ ಸಾಧನೆ
ಈ ಚಿತ್ರದಲ್ಲಿ ಆದಿತ್ಯ ಅವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ ನಟಿಸುತ್ತಿದ್ದು ಸ್ವಾತಿ ಕುಮಾರ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅದಿತಿ ಪ್ರಭುದೇವ ಈ ಸಿನಿಮಾ ಹೊರತುಪಡಿಸಿ ಸುಮಾರು 10 ಚಿತ್ರಗಳಲ್ಲಿ ನಟಿಸಿದ್ದಾರೆ 5 ಸಿನಿಮಾಗಳು ಬಿಡುಗಡೆಗೆ ಸಿದ್ದವಾಗಿವೆ.