alex Certify ಬಸ್​ – ವ್ಯಾಗನಾರ್​ ಮುಖಾಮುಖಿ ಡಿಕ್ಕಿ: ಐವರ ದಾರುಣ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್​ – ವ್ಯಾಗನಾರ್​ ಮುಖಾಮುಖಿ ಡಿಕ್ಕಿ: ಐವರ ದಾರುಣ ಸಾವು

ಬಸ್​ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಈ ಅವಘಡದಲ್ಲಿ ಐವರು ಸಾವನ್ನಪ್ಪಿದ ದಾರುಣ ಘಟನೆ ಜಾರ್ಖಂಡ್​ನ ರಾಮಗರ್ ಜಿಲ್ಲೆಯಲ್ಲಿ ಸಂಭವಿಸಿದೆ. ರಾಜರಪ್ಪ ಪೊಲೀಸ್​ ಠಾಣೆಯ ವ್ಯಾಪಿಯ ಮರಬಂದ ಎಂಬಲ್ಲಿ ಈ ದುರಂತ ವರದಿಯಾಗಿದೆ.

ಅಪಘಾತದಲ್ಲಿ ಬಸ್​​ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ರಾಮಘರ್​ – ಗೋಲಾ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್​ ಹಾಗೂ ವಾಗನಾರ್​ ಕಾರು ಬೆಳಗ್ಗೆ 8 ಗಂಟೆ ಸುಮಾರಿಗೆ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ದುರಂತದಲ್ಲಿ ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್​ ಸೂಪರಿಂಟೆಂಡೆಂಟ್​​ ಪ್ರಭಾತ್​ ಕುಮಾರ್​ ಮಾಹಿತಿ ನೀಡಿದರು.
ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಓರ್ವ ಅಪ್ರಾಪ್ತ ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪಾಟ್ನಾದವರಾಗಿದ್ದು ಅವರ ವಿಳಾಸವನ್ನು ಪತ್ತೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಪಘಾತಕ್ಕೆ ನಿಖರ ಕಾರಣದ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಪ್ರಭಾತ್​ ಕುಮಾರ್​ ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...