
ರಾಯ್ ಪುರ: ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಕೊರೋನಾ ಸೋಂಕಿತರು ಸಾವನ್ನಪ್ಪಿದ ಘಟನೆ ಛತ್ತೀಸಗಢದ ರಾಯ್ ಪುರ ಆಸ್ಪತ್ರೆಯಲ್ಲಿ ನಡೆದಿದೆ.
ರಾಜಧಾನಿ ರಾಯ್ ಪುರದಲ್ಲಿನ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಶನಿವಾರ ತಡರಾತ್ರಿ ಘಟನೆ ನಡೆದಿದ್ದು 5 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇತರ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ತಾಕೇಶ್ವರ್ ಪಟೇಲ್ ತಿಳಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆಸ್ಪತ್ರೆಯ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮುಖ್ಯಮಂತ್ರಿ ಭೂಪೇಶ್ ಭಾಗೇಲ್ ಅವರು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.