alex Certify ಮಧುಮೇಹಿಗಳು ತಿನ್ನಲೇಬೇಕಾದ 5 ಹಣ್ಣುಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧುಮೇಹಿಗಳು ತಿನ್ನಲೇಬೇಕಾದ 5 ಹಣ್ಣುಗಳು

ಪ್ರತಿಯೊಂದು ರೋಗದ ವಿರುದ್ಧದ ಹೋರಾಟದಲ್ಲಿ ಹಣ್ಣುಗಳ ಪಾತ್ರ ಬಹುಮುಖ್ಯ. ಕೆಲವು ಹಣ್ಣುಗಳಂತೂ ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿವೆ. ಅವುಗಳ ಪೈಕಿ ಡಯಾಬಿಟಿಸ್‌ ನಿಯಂತ್ರಣಕ್ಕೆ ಸಹಾಯ ಮಾಡುವ ಹಣ್ಣುಗಳು ಯಾವ್ಯಾವುದು ಅಂತ ನೋಡೋಣ.

ಮಧುಮೇಹ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುವ ಸಮಸ್ಯೆಯಾಗಿದೆ. ಹಾಗಾಗಿ ನಿಮ್ಮ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಈ ರೋಗದ ವಿರುದ್ಧ ಹೋರಾಡಬಹುದು.

ಸೀಬೆ ಕಾಯಿ ಅಥವಾ ಪೇರಲ ಹಣ್ಣು : ಪೇರಲ ಹಣ್ಣನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ವಿಟಮಿನ್ ಎ ಮತ್ತು ಸಿ, ಫೋಲೇಟ್, ಪೊಟ್ಯಾಸಿಯಮ್‌ನಂತಹ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಪೇರಲ ಮಧುಮೇಹವನ್ನು ತಡೆಗಟ್ಟಲು ಪ್ರಯೋಜನಕಾರಿಯಾಗಿದೆ.

ನೇರಳೆ ಹಣ್ಣು : ನೇರಳೆ ಅಥವಾ ಜಾಮೂನು ಎಂದೇ ಕರೆಯಲ್ಪಡುವ ಈ ಹಣ್ಣು ಸಹ ಸಕ್ಕರೆ ಕಾಯಿಲೆ ಇರುವವರಿಗೆ ಅನುಕೂಲ ಮಾಡಿಕೊಡುತ್ತದೆ. ನೇರಳೆ ಹಣ್ಣು ಸೇವನೆಯಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಸೇಬು: ಮಧುಮೇಹ ರೋಗಿಗಳಿಗೆ ಸೇಬು ತುಂಬಾ ಪ್ರಯೋಜನಕಾರಿಯಾಗಿದೆ. ವಾಸ್ತವವಾಗಿ, ಇದು ಕರಗಬಲ್ಲ ಮತ್ತು ಕರಗದ ಫೈಬರ್ ಅನ್ನು ಹೊಂದಿರುತ್ತದೆ, ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಕಿವಿ ಹಣ್ಣು : ಎಲ್ಲರಿಗೂ ಗೊತ್ತಿರುವಂತೆ ಕಿವಿ ಹಣ್ಣಿನಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಡಯಾಬಿಟಿಸ್‌ ಇರುವವರು ಕಿವಿ ಹಣ್ಣನ್ನು ಸೇವಿಸುವುದು ಉತ್ತಮ. ಕಿವಿ ಹಣ್ಣಿನಲ್ಲಿ ವಿಟಮಿನ್ ಎ, ವಿಟಮಿನ್-ಸಿ, ಆ್ಯಂಟಿ ಆಕ್ಸಿಡೆಂಟ್‌ಗಳು ಹೇರಳವಾಗಿವೆ. ಇದು ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ಕಿತ್ತಳೆ: ಕಿತ್ತಳೆ ಕೂಡ ಸಕ್ಕರೆ ಕಾಯಿಲೆಗೆ ರಾಮಬಾಣ. ಕಿತ್ತಳೆಯಲ್ಲಿ ಫೈಬರ್, ವಿಟಮಿನ್ ಸಿ, ಫೋಲೇಟ್ ಮತ್ತು ಪೊಟ್ಯಾಸಿಯಮ್ ಸಮೃದ್ಧವಾಗಿದೆ. ಇದು ಮಧುಮೇಹವನ್ನು ನಿವಾರಿಸಲು ಸಹಾಯ ಮಾಡುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...