alex Certify BIG NEWS: ಕನ್ನಡ ಶಾಲೆಗಳಿಗೆ ಮೂಲ ಸೌಕರ್ಯ ಸೇರಿ ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ 5 ಪ್ರಮುಖ ನಿರ್ಣಯಗಳ ಅಂಗೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡ ಶಾಲೆಗಳಿಗೆ ಮೂಲ ಸೌಕರ್ಯ ಸೇರಿ ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ 5 ಪ್ರಮುಖ ನಿರ್ಣಯಗಳ ಅಂಗೀಕಾರ

ಮಂಡ್ಯ: ಮಂಡ್ಯದಲ್ಲಿ ಅದ್ದೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆ ಬಿದ್ದಿದೆ. ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಮಂಡ್ಯ ಸಮ್ಮೇಳನದಲ್ಲಿ 5 ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ನಿಯಮ ಸಮಗ್ರವಾಗಿ ಕೂಡಲೇ ಜಾರಿಯಾಗಬೇಕು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನು ರಾಜ್ಯ ಸಮಿತಿ ಉಪಾಧ್ಯಕ್ಷರನ್ನಾಗಿಸಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ.

ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ಕೋರ್ಟ್ ನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸರ್ಕಾರ ಸಮರ್ಥವಾಗಿ ಎದುರಿಸಬೇಕು. ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸಬೇಕು.

ಎಲ್ಲಾ ಕನ್ನಡ ಶಾಲೆಗಳಿಗೆ ಕಟ್ಟಡ, ಆಟದ ಮೈದಾನ ಸೇರಿ ಇತರೆ ಮೂಲ ಸೌಕರ್ಯ ಒದಗಿಸಬೇಕು. ಶಿಕ್ಷಕರ ನೇಮಕಾತಿಗೆ ತ್ವರಿತ ಕ್ರಮ ಕೈಗೊಳ್ಳಬೇಕು. ಕನ್ನಡೇತರ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡಬೇಕು.

ರಾಷ್ಟ್ರಕವಿಯನ್ನು ಅತಿ ಶೀಘ್ರದಲ್ಲಿ ಘೋಷಿಸಬೇಕು. ದಾವಣಗೆರೆ ವಿಶ್ವಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಹಿತ್ಯ ಪರಿಷತ್ತಿನ ಜೊತೆ ಶೀಘ್ರವಾಗಿ ನಡೆಸಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...