ಬೆಂಗಳೂರು : ಆ್ಯಸಿಡ್ ಸಂತ್ರಸ್ತೆಯರಿಗೆ ಗೆಳತಿ ಯೋಜನೆಯಡಿ ರಾಜ್ಯ ಸರ್ಕಾರ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.
2023-24ನೇ ಸಾಲಿನಲ್ಲಿ ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಮಹಿಳೆಯರ ಪುನರ್ವಸತಿಗಾಗಿ ‘ಗೆಳತಿ’ ಯೋಜನೆಯಡಿ ಪ್ರತಿ ಫಲಾನುಭವಿಗೆ ₹5 ಲಕ್ಷದವರೆಗೆ (ಸಾಲ 2.50 ಲಕ್ಷ ಹಾಗೂ ಸಹಾಯಧನ ₹2.50 ಲಕ್ಷ) ಸಾಲ ಸೌಲಭ್ಯ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಸಂತ್ರಸ್ತ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಜ.31ರೊಳಗೆ ಅರ್ಜಿ ಸಲ್ಲಿಸ ಬೇಕು, ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯ ನಗರ, ಬೆಂಗಳೂರು ಇವರನ್ನು ಸಂಪರ್ಕಿಸಬಹುದು. ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.