
ಹುಬ್ಬಳ್ಳಿ: ಹಿರಿಯ ವಿದ್ಯಾರ್ಥಿಗಳ ಪರವಾಗಿ ಕಿರಿಯ ವಿದ್ಯಾರ್ಥಿಗಳು ಕ್ಲಾಸಿಗೆ ಹಾಜರಾಗಿದ್ದು, ತರಗತಿಗೆ ಹಾಜರಾಗಿದ್ದ ಐವರು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ವೈದ್ಯಕೀಯ ಕಾಲೇಜು ಮಹಾವಿದ್ಯಾಲಯದಲ್ಲಿ ನಡೆದಿದೆ.
ಹುಬ್ಬಳ್ಳಿಯ ಕಿಮ್ಸ್ ಆಡಳಿತ ಮಂಡಳಿ ಐವರು ಎಂಬಿಬಿಎಸ್ ವಿದ್ಯಾರ್ಥಿಗಳ ವಿರುದ್ಧ ಶಿಸ್ತುಕ್ರಮ ಕೈಗೊಂಡಿದೆ. ಕೊನೆಯ ತರಗತಿ ನಡೆಯುತ್ತಿದಾಗ ಕೆಲ ವಿದ್ಯಾರ್ಥಿಗಳನ್ನು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಹೆದರಿಸುತ್ತಿದ್ದರು. ತಮ್ಮ ಪರವಾಗಿ ತರಗತಿಗಳಿಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಸೂಚಿಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಭಾಗದ ಸಹಾಯಕ ಪ್ರಾಧ್ಯಾಪಕ ವಿಚಾರಿಸಿದ್ದರು.
ಪ್ರಾಚಾರ್ಯ ಡಾ.ಗುರುಶಾಂತಪ್ಪ ಯಲಗಜ್ಜೆಯವರಿಗೆ ಮಾಹಿತಿ ನೀಡಿದ್ದರು. ಅವರು ರ್ಯಾಗಿಂಗ್ ನಿಯಂತ್ರಕ ಸಮೀತಿಗೆ ವರದಿ ನೀಡುವಂತೆ ಸೂಚಿಸಿದ್ದರು. ಘಟನೆ ಬಗ್ಗೆ ಸಂಪೂರ್ಣ ವರದಿ ನೀಡಿವಂತೆ ಕಿಮ್ಸ್ ನಿರ್ದೇಶಕ ಡಾ.ಎಸ್.ಎಫ್ ಕಮ್ಮಾರ ಸೂಚಿಸಿದ್ದರು. ವರದಿ ಆಧರಿಸಿ ಐವರು ವಿದ್ಯಾರ್ಥಿಗಳನ್ನು ಒಂದು ತಿಂಗಳ ಕಾಲ ಕಾಲೇಜಿನಿಂದ ಸಸ್ಪೆಂಡ್ ಮಾಡಲಾಗಿದೆ.