alex Certify ಮನೆಯಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ

ಒಂದೇ ಕುಟುಂಬದ ಐವರು ಸದಸ್ಯರು ಮನೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಪ್ರಯಾಗ್ ರಾಜ್‌ನಲ್ಲಿ ನಡೆದಿದೆ.

ದಂಪತಿ ಮತ್ತು ಮೂವರು ಅಪ್ರಾಪ್ತ ಮಕ್ಕಳು ಶನಿವಾರ ಪ್ರಯಾಗ್‌ರಾಜ್‌ನ ನವಾಬ್‌ಗಂಜ್ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

41 ವರ್ಷದ ರಾಹುಲ್ ತಿವಾರಿ ಮೃತದೇಹ ಸೀಲಿಂಗ್‌ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಮತ್ತು ಅದರಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ. ಅವರ ದೇಹ ಪತ್ತೆಯಾದ ಸ್ಥಳದಲ್ಲಿ ಮೂರು ಕುರ್ಚಿಗಳನ್ನು ಜೋಡಿಸಲಾಗಿತ್ತು, ಅದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೂಚಿಸುತ್ತದೆ. ರಾಹುಲ್ ಪತ್ನಿ ಮತ್ತು ಮೂವರು ಪುತ್ರಿಯರ ಮೃತದೇಹದಲ್ಲಿ ಹರಿತವಾದ ಆಯುಧದಿಂದ ಗಾಯದ ಗುರುತುಗಳಿದ್ದು, ಇದು ಕೊಲೆಯಾಗಿರುವುದನ್ನು ಸೂಚಿಸುತ್ತದೆ. ಎರಡೂ ಆಯಾಮದಲ್ಲಿ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸರೋವರದಲ್ಲಿ ತಿರುಗುತ್ತಿರುವ ಸುಳಿಯ ಫೋಟೋ ವೈರಲ್..!

ತಿವಾರಿ ಬರೆದಿರುವ ಸೂಸೈಡ್ ನೋಟ್ ವಶಪಡಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅತ್ತೆ ಮಾವಂದಿರು ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್ ನೋಟ್‌ನಲ್ಲಿ ಆರೋಪಿಸಲಾಗಿದೆ. ಹೆಚ್ಚಿನ‌ ತನಿಖೆಗಾಗಿ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.‌ ವಿಧಿವಿಜ್ಞಾನ ತಜ್ಞರು ಹಾಗೂ ಶ್ವಾನ ದಳ ಕೂಡ ಸ್ಥಳಕ್ಕೆ ಧಾವಿಸಿದೆ.

ಈ ಪ್ರಕರಣದಲ್ಲಿ ಕೊಲೆ ಆರೋಪದ ಮೇಲೆ ಇಬ್ಬರು ಸಹೋದರರು ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ಕೌಶಂಬಿಯಿಂದ ಬಂದ ತಿವಾರಿ ಜೀವನೋಪಾಯಕ್ಕಾಗಿ ಕೂಲಿ ಕೆಲಸ ಮಾಡುತ್ತಿದ್ದರು. ಶನಿವಾರ ಬೆಳಗ್ಗೆ ಕುಟುಂಬದ ಸ್ನೇಹಿತ ದಾದೂ ಸರೋಜ್ ಅವರ ನಿವಾಸಕ್ಕೆ ಭೇಟಿ ನೀಡಿ ಶವಗಳನ್ನು ಗಮನಿಸಿ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...