ಅಹಮದ್ ನಗರ: ಪಾಳು ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ನಡೆದಿದೆ.
ಪಾಳು ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗಿದೆ. ಈ ಬಾವಿಗೆ ಬೆಕ್ಕು ಬಿದ್ದಿತ್ತು. ಬೆಕ್ಕನ್ನು ರಕ್ಷಿಸಲು ಒಬ್ಬರ ಬಳಿಕ ಒಬ್ಬರು ಬಾವಿಗೆ ಹಾರಿದ್ದಾರೆ. ಹೀಗೆ ಹಾರಿದವರು ಬಾವಿಯಲ್ಲಿ ಮೃತಪಟ್ಟಿದ್ದಾರೆ.
ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಹಾರಿದ್ದ ಓರ್ವನನ್ನು ಪೊಲಿಸರು ರಕ್ಷಿಸಿದ್ದಾರೆ. ಒಬ್ಬರ ಬಳಿಕ ಒಬ್ಬರು ಒಟ್ಟು 6 ಜನ ಬಾವಿಗೆ ಹಾರಿದ್ದು, ಅವರಲ್ಲಿ ಐವರು ಮೃತಪಟ್ಟಿದ್ದಾರೆ. ಓರ್ವನನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಧನಂಜಯ ತಿಳಿಸಿದ್ದಾರೆ.
ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಾವಿಯಲ್ಲಿ ಪ್ರಾಣಿಗಳ ತ್ಯಾಜ್ಯವನ್ನು ಸಂಗ್ರಹಿಸಲಾಗಿತ್ತು ಎಂದು ತಿಳಿಸಿದ್ದಾರೆ.