alex Certify BIG NEWS: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ದುರ್ಮರಣ

ಅಹಮದ್ ನಗರ: ಪಾಳು ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ನಡೆದಿದೆ.

ಪಾಳು ಬಾವಿಯನ್ನು ಜೈವಿಕ ಅನಿಲ ಪಿಟ್ ಆಗಿ ಬಳಸಲಾಗಿದೆ. ಈ ಬಾವಿಗೆ ಬೆಕ್ಕು ಬಿದ್ದಿತ್ತು. ಬೆಕ್ಕನ್ನು ರಕ್ಷಿಸಲು ಒಬ್ಬರ ಬಳಿಕ ಒಬ್ಬರು ಬಾವಿಗೆ ಹಾರಿದ್ದಾರೆ. ಹೀಗೆ ಹಾರಿದವರು ಬಾವಿಯಲ್ಲಿ ಮೃತಪಟ್ಟಿದ್ದಾರೆ.

ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ಬಾವಿಗೆ ಹಾರಿದ್ದ ಓರ್ವನನ್ನು ಪೊಲಿಸರು ರಕ್ಷಿಸಿದ್ದಾರೆ. ಒಬ್ಬರ ಬಳಿಕ ಒಬ್ಬರು ಒಟ್ಟು 6 ಜನ ಬಾವಿಗೆ ಹಾರಿದ್ದು, ಅವರಲ್ಲಿ ಐವರು ಮೃತಪಟ್ಟಿದ್ದಾರೆ. ಓರ್ವನನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಧನಂಜಯ ತಿಳಿಸಿದ್ದಾರೆ.

ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಾವಿಯಲ್ಲಿ ಪ್ರಾಣಿಗಳ ತ್ಯಾಜ್ಯವನ್ನು ಸಂಗ್ರಹಿಸಲಾಗಿತ್ತು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...