alex Certify ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಇಲ್ಲಿದೆ 5 ಸರಳ ಜೀವನಶೈಲಿ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಇಲ್ಲಿದೆ 5 ಸರಳ ಜೀವನಶೈಲಿ ಬದಲಾವಣೆ

 

ವಿಶ್ವಾದ್ಯಂತ ಅನೇಕ ಜನರ ಸಾವಿಗೆ ಕ್ಯಾನ್ಸರ್ ಪ್ರಮುಖ ಕಾರಣವಾಗುತ್ತಿದೆ. ಇದರ ಜೊತೆ ಪ್ರತಿ ವರ್ಷ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. Cancer.gov ಪ್ರಕಾರ 2040 ರ ವೇಳೆಗೆ ವರ್ಷಕ್ಕೆ ಹೊಸ ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ 29.5 ಮಿಲಿಯನ್‌ಗೆ ಮತ್ತು ಕ್ಯಾನ್ಸರ್ ಸಂಬಂಧಿತ ಸಾವಿನ ಸಂಖ್ಯೆ 16.4 ಮಿಲಿಯನ್‌ಗೆ ಏರುವ ಸಾಧ್ಯತೆಯಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಕ್ಯಾನ್ಸರ್‌ನ್ನು ಪತ್ತೆಹಚ್ಚುವ ಮತ್ತು ಚಿಕಿತ್ಸೆ ನೀಡುವ ವಿಧಾನವನ್ನು ಸುಧಾರಿಸಿದ್ದರೂ ಸಹ ಈವರೆಗೂ ಈ ಮಾರಣಾಂತಿಕ ಕಾಯಿಲೆಯ ಸಂಭವವನ್ನು ತಡೆಯಲು ಖಚಿತವಾದ ಮಾರ್ಗೋಪಾಯವಿಲ್ಲ.

ದುರಾದೃಷ್ಟ, ಪರಿಸರ ಅಥವಾ ಆನುವಂಶಿಕತೆಯಿಂದ ಕ್ಯಾನ್ಸರ್ ಉಂಟಾಗಬಹುದು ಎಂದು ತಜ್ಞರು ಹೇಳುತ್ತಾರೆ, ಆದರೆ ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಹೆಚ್ಚಿಸುವಲ್ಲಿ ಅಥವಾ ಕಡಿಮೆ ಮಾಡುವಲ್ಲಿ ಪರಿಸರವು ಪ್ರಮುಖ ಪಾತ್ರ ವಹಿಸುತ್ತದೆ. ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನೆಟ್‌ನಲ್ಲಿ ಪ್ರಕಟವಾದ ಲೇಖನದ ಪ್ರಕಾರ, ಹೆಚ್ಚಿನ ಕ್ಯಾನ್ಸರ್‌ಗಳಿಗೆ ಮೂಲ ಕಾರಣ ಪರಿಸರ ಮತ್ತು ಜೀವನಶೈಲಿಯಾಗಿದೆ. ಎಲ್ಲಾ ಕ್ಯಾನ್ಸರ್ ಪ್ರಕರಣಗಳಲ್ಲಿ 5-10% ಮಾತ್ರ ಆನುವಂಶಿಕ ದೋಷಗಳು ಕಾರಣವೆಂದು ಹೇಳಲಾಗಿದೆ.

ಕೆಲವು ಜೀವನಶೈಲಿ ಅಂಶಗಳಾದ ಸಿಗರೇಟ್ ಸೇವನೆ, ಕರಿದ ಆಹಾರ, ಕೆಂಪು ಮಾಂಸ, ಆಲ್ಕೋಹಾಲ್, ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದು, ಪರಿಸರ ಮಾಲಿನ್ಯಕಾರಕಗಳು, ಸೋಂಕುಗಳು, ಒತ್ತಡ, ಸ್ಥೂಲಕಾಯತೆ ಮತ್ತು ದೈಹಿಕ ನಿಷ್ಕ್ರಿಯತೆ ಕ್ಯಾನ್ಸರ್‌ಗೆ ಅಪಾಯಕಾರಿ ಅಂಶಗಳಾಗಿವೆ ಎಂದು ವರದಿ ಹೇಳುತ್ತದೆ. ಎಲ್ಲಾ ಕ್ಯಾನ್ಸರ್-ಸಂಬಂಧಿತ ಸಾವುಗಳಲ್ಲಿ, ಬಹುತೇಕ 25-30% ತಂಬಾಕಿನಿಂದ ಉಂಟಾಗುತ್ತದೆ, 30-35% ರಷ್ಟು ಆಹಾರದೊಂದಿಗೆ ಸಂಬಂಧ ಹೊಂದಿದೆ, ಸುಮಾರು 15-20% ನಷ್ಟು ಸೋಂಕುಗಳು ಮತ್ತು ಉಳಿದ ಶೇಕಡಾವಾರು ಕಾರಣ ಎಂದು ಪುರಾವೆಗಳು ಸೂಚಿಸುತ್ತವೆ.

ಬೆಂಗಳೂರಿನ ಫೋರ್ಟಿಸ್ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನ ಸರ್ಜಿಕಲ್ ಆಂಕೊಲಾಜಿಯ ಹಿರಿಯ ನಿರ್ದೇಶಕ ಡಾ ಸಂದೀಪ್ ನಾಯಕ್ ಅವರು ಸಂದರ್ಶನವೊಂದರಲ್ಲಿ ಕೆಲವು ಜೀವನಶೈಲಿ ಮಾರ್ಪಾಡುಗಳ ಮೂಲಕ ಕ್ಯಾನ್ಸರ್ ಅನ್ನು ಅಭಿವೃದ್ಧಿಪಡಿಸುವ ಸಾಧ್ಯತೆಗಳನ್ನು ಕಡಿಮೆ ಮಾಡುವ ಮಾರ್ಗಗಳನ್ನು ಹೇಳಿದ್ದಾರೆ.
ಈ ಕ್ಯಾನ್ಸರ್ ಕಾಯಿಲೆ ಬರುವ ಸಾಧ್ಯತೆಗಳನ್ನು ಕಡಿಮೆ ಮಾಡಲು ಐದು ಮಾರ್ಗಗಳು ಇಲ್ಲಿವೆ:

1. ಆರೋಗ್ಯಕರ ಆಹಾರವನ್ನು ಕಾಪಾಡಿಕೊಳ್ಳಿ

ಆರೋಗ್ಯಕರ ಆಹಾರವನ್ನು ಕಾಪಾಡಿಕೊಳ್ಳುವುದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವಲ್ಲಿ ನಿರ್ಣಾಯಕವಾಗಿದೆ. ಹಣ್ಣುಗಳು ಮತ್ತು ತರಕಾರಿಗಳಲ್ಲಿ ಸಮೃದ್ಧವಾಗಿರುವ ಮತ್ತು ಕಡಿಮೆ ಸಂಸ್ಕರಿಸಿದ ಆಹಾರಗಳು ಕ್ಯಾನ್ಸರ್‌ನಿಂದ ರಕ್ಷಿಸಲು ಸಹಾಯವಾಗುತ್ತದೆ. ಹಣ್ಣುಗಳು ಮತ್ತು ತರಕಾರಿಗಳು ವಿವಿಧ ವಿಟಮಿನ್‌ಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಇದು ಕ್ಯಾನ್ಸರ್ ವಿರುದ್ಧ ರಕ್ಷಿಸಲು ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಆಹಾರಗಳು ಮತ್ತು ಕೆಂಪು ಮಾಂಸಗಳು ಹೆಚ್ಚಿನ ಅಪಾಯವನ್ನುಂಟು ಮಾಡುತ್ತದೆ. ನಿರ್ದಿಷ್ಟವಾಗಿ ಹೇಳುವುದಾದರೆ ಬ್ರೊಕೊಲಿ, ಹೂಕೋಸು ಮತ್ತು ಬ್ರಸೆಲ್ಸ್ ಮೊಗ್ಗುಗಳಂತಹ ಕ್ರೂಸಿಫೆರಸ್ ತರಕಾರಿಗಳಲ್ಲಿ ಸಮೃದ್ಧವಾಗಿರುವ ಆಹಾರವು ಕ್ಯಾನ್ಸರ್-ಹೋರಾಟದ ಗುಣಲಕ್ಷಣಗಳನ್ನು ಹೊಂದಿದೆ ಎಂದು ಪರೀಕ್ಷಿಸಲಾಗಿದೆ.

2. ನಿಯಮಿತವಾಗಿ ವ್ಯಾಯಾಮ ಮಾಡಿ

ಇನ್ನು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ನಿಯಮಿತ ದೈಹಿಕ ಚಟುವಟಿಕೆ ಅತ್ಯಗತ್ಯ. ವ್ಯಾಯಾಮವು ಸ್ತನ ಮತ್ತು ಕರುಳಿನ ಕ್ಯಾನ್ಸರ್ ಸೇರಿದಂತೆ ಹಲವಾರು ರೀತಿಯ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಅಧ್ಯಯನ ನಡೆಸಲಾಗಿದೆ. ವೇಗದ ನಡಿಗೆ, ಸೈಕ್ಲಿಂಗ್ ಅಥವಾ ಈಜು ಮುಂತಾದ ದಿನಕ್ಕೆ ಕನಿಷ್ಠ 30 ನಿಮಿಷಗಳ ಮಧ್ಯಮ ವ್ಯಾಯಾಮವನ್ನು ಮಾಡಬೇಕು. ನಿಯಮಿತ ದೈಹಿಕ ಚಟುವಟಿಕೆಯು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರ ಜೊತೆ ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸಹ ಸುಧಾರಿಸುತ್ತದೆ ಎಂದು ಅಧ್ಯಯನಗಳು ತೋರಿಸಿವೆ.

3. ತಂಬಾಕು ಬಳಕೆ ತಪ್ಪಿಸಿ

ತಂಬಾಕಿನ ಬಳಕೆಯು ವಿಶ್ವಾದ್ಯಂತ ತಡೆಗಟ್ಟಬಹುದಾದ ಸಾವುಗಳಿಗೆ ಪ್ರಮುಖ ಕಾರಣವಾಗಿದೆ ಮತ್ತು ಎಲ್ಲಾ ಕ್ಯಾನ್ಸರ್ ಸಾವುಗಳಲ್ಲಿ ಅರ್ಧದಷ್ಟು ಕಾರಣವಾಗಿದೆ. ಧೂಮಪಾನವನ್ನು ತ್ಯಜಿಸುವುದು ನಿಮ್ಮ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ನೀವು ಮಾಡಬಹುದಾದ ಅತ್ಯುತ್ತಮ ಕೆಲಸಗಳಲ್ಲಿ ಒಂದಾಗಿದೆ. ಬಾಯಿಯ ಮತ್ತು ಶ್ವಾಸಕೋಶದ ಕ್ಯಾನ್ಸರ್ ಜೊತೆಗೆ, ಧೂಮಪಾನವು ಮೂತ್ರಕೋಶ, ಮೇದೋಜ್ಜೀರಕ ಗ್ರಂಥಿ ಮತ್ತು ಗಂಟಲು ಕ್ಯಾನ್ಸರ್ ಸೇರಿದಂತೆ ಹಲವಾರು ಇತರ ರೀತಿಯ ಕ್ಯಾನ್ಸರ್‌ಗಳ ಅಪಾಯವನ್ನು ಹೆಚ್ಚಿಸುತ್ತದೆ.

4. ಆಲ್ಕೋಹಾಲ್ ಸೇವನೆಯನ್ನು ಮಿತಿಗೊಳಿಸಿ

ಮಿತಿಮೀರಿದ ಆಲ್ಕೋಹಾಲ್ ಸೇವನೆಯು ಸ್ತನ, ಕೊಲೊನ್ ಮತ್ತು ಯಕೃತ್ತಿನ ಕ್ಯಾನ್ಸರ್ ಸೇರಿದಂತೆ ಹಲವಾರು ರೀತಿಯ ಕ್ಯಾನ್ಸರ್‌ಗಳ ಅಪಾಯವನ್ನು ಹೆಚ್ಚಿಸುತ್ತದೆ. ನಿಮ್ಮ ಆಲ್ಕೋಹಾಲ್ ಸೇವನೆಯನ್ನು ಮಹಿಳೆಯರಿಗೆ ದಿನಕ್ಕೆ ಒಂದು ಪಾನೀಯಕ್ಕೆ ಮತ್ತು ಪುರುಷರಿಗೆ ದಿನಕ್ಕೆ ಎರಡು ಪಾನೀಯಗಳಿಗೆ ಸೀಮಿತಗೊಳಿಸುವುದು ಉತ್ತಮ. ಕ್ಯಾನ್ಸರ್ ಜೊತೆಗೆ, ಅತಿಯಾದ ಆಲ್ಕೋಹಾಲ್ ಸೇವನೆಯು ಯಕೃತ್ತಿನ ಕಾಯಿಲೆ ಮತ್ತು ಹೃದ್ರೋಗ ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.

5. ಸೂರ್ಯನಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ

ಚರ್ಮದ ಕ್ಯಾನ್ಸರ್ ತಡೆಗಟ್ಟುವಲ್ಲಿ ಸೂರ್ಯನಿಂದ ರಕ್ಷಣೆ ಅತ್ಯಗತ್ಯ. ರಕ್ಷಣಾತ್ಮಕ ಉಡುಪುಗಳನ್ನು ಧರಿಸಿ ಮತ್ತು ಸೂರ್ಯನ ಕಿರಣಗಳು ಪ್ರಬಲವಾಗಿರುವ ದಿನದ ಮಧ್ಯದಲ್ಲಿ ದೀರ್ಘಾವಧಿಯ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ. ಹೆಚ್ಚುವರಿಯಾಗಿ ನಿಮ್ಮ ಚರ್ಮದಲ್ಲಿ ಯಾವುದೇ ಬದಲಾವಣೆಗಳ ಬಗ್ಗೆ ತಿಳಿದಿರುವುದು ಮತ್ತು ಯಾವುದೇ ಅನುಮಾನಾಸ್ಪದ ಮಚ್ಚೆಗಳನ್ನು ಚರ್ಮರೋಗ ವೈದ್ಯರಿಂದ ಪರೀಕ್ಷಿಸುವುದು ಮುಖ್ಯವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...