ಶಾಲೆಯಲ್ಲೇ ವಿದ್ಯಾರ್ಥಿನಿ ಮೇಲೆ ಹಲ್ಲೆ, ಕಿರುಕುಳ ನೀಡಿದ 5 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲು

ನೋಯ್ಡಾದ ಶಾಲಾ ಆವರಣದಲ್ಲಿ ತಮ್ಮ ಸಹಪಾಠಿಯ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಲೈಂಗಿಕ ಕಿರುಕುಳದ ಬಗ್ಗೆ ಅಕ್ಟೋಬರ್ 9 ರಂದು ಶಾಲೆಯ ಪ್ರಾಂಶುಪಾಲರಿಗೆ ವರದಿ ಮಾಡಿದ್ದೆವು. ಆದರೆ ಆರೋಪಿ ಅಕ್ಟೋಬರ್ 13 ರಂದು ಮತ್ತೆ ಅವಳೊಂದಿಗೆ ಅನುಚಿತವಾಗಿ ವರ್ತಿಸಿದ ನಂತರ ಪೊಲೀಸರಿಗೆ ದೂರು ನೀಡಲಾಗಿದೆ ಬಾಲಕಿಯ ತಂದೆ ಹೇಳಿಕೊಂಡಿದ್ದಾರೆ.

ನೋಯ್ಡಾ ಸೆಕ್ಟರ್ 100 ರಲ್ಲಿನ ಖಾಸಗಿ ಶಾಲೆಯು ತನ್ನದೇ ಆದ ತನಿಖೆಯನ್ನು ಪ್ರಾರಂಭಿಸಿದೆ.

11 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯ ಮೇಲೆ ಆಕೆಯ ಸಹಪಾಠಿಗಳು ಹಲ್ಲೆ ನಡೆಸಿದ್ದಾರೆ. ಸ್ಥಳೀಯ ಸೆಕ್ಟರ್ 39 ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ನಂತರ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣದ ಎಲ್ಲಾ ಆರೋಪಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ಸೂಕ್ತವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read