
ಸೆಪ್ಟೆಂಬರ್ 30ರಂದು ಬಿಡುಗಡೆಯಾಗಿದ್ದ ಕಾಂತಾರ ಸಿನಿಮಾ ಭಾರತದೆಲ್ಲೆಡೆ ಭರ್ಜರಿ ಸೌಂಡ್ ಮಾಡುವ ಮೂಲಕ ಈಗಾಗಲೇ 370 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ್ದು, ಇದೀಗ 50 ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ರಿಷಭ್ ಶೆಟ್ಟಿ ನಿರ್ದೇಶಿಸಿ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಅಭಿನಯಿಸಿದ್ದು, ಮಾನಸಿ ಸುಧೀರ್, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ದೀಪಕ್ ರಾಯ್ ಪಣಜೆ, ಸ್ವರಾಜ್ ಶೆಟ್ಟಿ, ನವೀನ್ ಸೇರಿದಂತೆ ಮೊದಲಾದ ಕಲಾವಿದರು ತೆರೆಹಂಚಿಕೊಂಡಿದ್ದಾರೆ. ಹೊಂಬಾಳೆ ಫಿಲ್ಮ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ಬಂಡವಾಳ ಹೂಡಿದ್ದಾರೆ. ಕೇವಲ 16 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಚಿತ್ರ ಯಾರು ಊಹಿಸಲಾಗದ ದಾಖಲೆ ಬರೆಯುತ್ತಿದೆ.
