
ಬೆಂಗಳೂರು : ಕಾಂಗ್ರೆಸ್ ನ 50 ಜನ ಬಿಜೆಪಿ ಹೈಕಮಾಂಡ್ ಜೊತೆಗೆ ಸಂಪರ್ಕದಲ್ಲಿದೆ ಎಂಬ ಮುರಗೇಶ್ ನಿರಾಣಿ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, ಬಿಜೆಪಿಯ 50 ಶಾಸಕರು ಕಾಂಗ್ರೆಸ್ ಗೆ ಬರಲು ರೆಡ್ಡಿ ಇದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ-ಜೆಡಿಎಸ್ ಲೋಕಸಭೆ ಚುನಾವಣೆ ಬಳಿಕ ಬಿಜೆಪಿ, ಜೆಡಿಎಸ್ ನಲ್ಲಿ ಯಾರೂ ಉಳಿಯಲ್ಲ. ಹಲವು ಶಾಸಕರು ಕಾಂಗ್ರೆಸ್ ಗೆ ಬರಲು ಸಿದ್ಧತೆ ನಡೆಸಿದ್ದಾರೆ. 5 ತಿಂಗಳು ಟೈಮ್ ಕೊಡುತ್ತೇನೆ 50 ಶಾಸಕರನ್ನು ಕರೆದುಕೊಂಡು ಹೋಗಲಿ ನೋಡೋಣ ಎಂದು ಅವರು ಬಿಜೆಪಿಗೆ ಸವಾಲು ಹಾಕಿದರು.
ಬಿಜೆಪಿಯ 50 ಜನರು ಬರುವುದಕ್ಕೆ ರೆಡಿ ಇದ್ದಾರೆ.. ಅವರು ಎಲ್ಲಾ ಸಮಸ್ಯೆ ಸರಿ ಮಾಡಿಕೊಂಡು ಬೆಳಗಾವಿ ಅಧಿವೇಶನಕ್ಕೆ ಬರಲಿ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.