ಬೆಂಗಳೂರು : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷವಾದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಲಾಂಛನ ಬಿಡುಗಡೆ ಮಾಡಿದರು.
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಾಗಿ 50 ವರ್ಷ ತುಂಬಿದ್ದರ ಅಂಗವಾಗಿ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಲಾಂಛನ ಬಿಡುಗಡೆ ಮಾಡಿದರು. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಾಗಿ 50 ವರ್ಷ ತುಂಬಿದ್ದರ ಅಂಗವಾಗಿ ವಿಧಾನಸೌಧದಲ್ಲಿ ನಡೆದ ಕರ್ನಾಟಕ 50 ಸಂಭ್ರಮದ ಲಾಂಛನ ಬಿಡುಗಡೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, , ಕೆಪಿಸಿಸಿ ಅಧ್ಯಕ್ಷರು ಹಾಗು ಡಿಸಿಎಂ ಡಿಕೆ ಶಿವಕುಮಾರ್ , ಕಾನೂನು ಸಚಿವರಾದ ಹೆಚ್ ಕೆ ಪಾಟೀಲ್ , ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ, ಸಿಎಂ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜ್, ಎಂಎಲ್ಸಿ ನಾಗರಾಜ್ ಯಾದವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣಗೊಂಡು 50 ವರ್ಷವಾದ ಹಿನ್ನೆಲೆ ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ 01 ನವೆಂಬರ್ 2023 ರಿಂದ 01 ನವೆಂಬರ್ 2024 ರವರೆಗೆ ಕರ್ನಾಟಕ ಸಂಭ್ರಮ ಆಚರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.