
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಬಾಂಬ್ ಸ್ಫೋಟಿಸಿದ್ದಾರೆ. 500 ಕೋಟಿ ವಹಿವಾಟು ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 2 ತಿಂಗಳಲ್ಲೇ ವರ್ಗಾವಣೆ ದಂಧೆಯಲ್ಲಿ 500 ಕೋಟಿ ವಹಿವಾಟು ನಡೆದಿದೆ ಎಂದು ಹೇಳಿದ್ದಾರೆ.
ಪ್ರತಿಯೊಂದು ಇಲಾಖೆಯಲ್ಲಿಯೂ ವರ್ಗವಣೆ ದಂಧೆ ನಡೆಯುತ್ತಿದೆ. ಅಧಿಕಾರಿಯೊಬ್ಬರು ನನಗೆ ಈ ಮಾಹಿತಿ ನೀಡಿದ್ದಾರೆ. ಕೇವಲ 2 ತಿಂಗಳಲ್ಲಿ 500 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದು ತಿಳಿಸಿದ್ದಾರೆ ಎಂದರು.