ಯಾದಗಿರಿ : ಕಲುಷಿತ ನೀರು ಸೇವಿಸಿ 54 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಇಮ್ಲಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ 54 ಜನರು ಕಲುಷಿತ ನೀರು ಸೇವನೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗುರುಮಠಕಲ್ ತಾಲೂಕಿನ ಇಮ್ಲಾಪುರ ಗ್ರಾಮದಲ್ಲಿ ಕಲುಷಿತ ನೀರು ಪೂರೈಸಿದ್ದು, ಇದನ್ನು ಸೇವಿಸಿದ ಗ್ರಾಮದ 50ಕ್ಕೂ ಅಧಿಕ ಜನರು ವಾಂತಿ ಬೇಧಿಯಿಂದ ಬಳಲುತ್ತಿದ್ದಾರೆ. ವಾಂತಿ, ಬೇಧಿ ಕಾಣಿಸಿಕೊಂಡವರನ್ನು ಗುರುಮಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ
ಅಸ್ವಸ್ಥಗೊಂಡವರನ್ನು ಗುರುಮಠಕಲ್ ತಾಲೂಕು ಮಟ್ಟದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕಲಬುರಗಿ, ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆ ಘಟನೆ ಮಾಸುವ ಮುನ್ನವೇ ಯಾದಗಿರಿಯಲ್ಲಿ ಈ ಘಟನೆ ನಡೆದಿದೆ.
ಬುದ್ದಿ ಕಲಿಯದ ಅಧಿಕಾರಿಗಳು
ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಒ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿತ್ತು. ಆದರೂ ಅಧಿಕಾರಿಗಳಿಗೆ ಬುದ್ದಿ ಬಂದಿಲ್ಲ. ಯಾದಗಿರಿಯಲ್ಲಿ ಅಂತಹುದ್ದೇ ಘಟನೆ ಮರುಕಳಿಸಿದೆ.ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾ.ಪಂ. ಪಿಡಿಒ ರವೀಂದ್ರ ಕುಲಕರ್ಣಿ ಹಾಗೂ ಬಿಜಕಲ್ ಗ್ರಾ.ಪಂ. ಪಿಡಿಒ ನಾಗೇಶ್ ರನ್ನು ಅಮಾನತು ಮಾಡಿ ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಪ್ರಿಯಾಂಕಾ ಮೇರಿ ಆದೇಶ ಹೊರಡಿಸಿದ್ದರು.
.