alex Certify 55 ನೇ ವಯಸ್ಸಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದು ಪಾಸ್ ಆದ ಬಿಜೆಪಿ ಮಾಜಿ ಶಾಸಕ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

55 ನೇ ವಯಸ್ಸಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಬರೆದು ಪಾಸ್ ಆದ ಬಿಜೆಪಿ ಮಾಜಿ ಶಾಸಕ….!

ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆ ಪಾಸ್ ಆಗುವುದು ಎಂದ್ರೆ ಅಷ್ಟು ಸುಲಭವಲ್ಲ. ಹಲವಾರು ಮಂದಿ ಒಂದೇ ಅಟೆಂಪ್ಟ್ ನಲ್ಲಿ ಪಾಸ್ ಆದ್ರೆ ಇನ್ನೂ ಕೆಲವರು ಬಹಳ ವರ್ಷ ಕಷ್ಟ ಪಟ್ಟು ಓದಿ ತೇರ್ಗಡೆ ಹೊಂದುತ್ತಾರೆ. ಇದೇ ರೀತಿ ಬಿಜೆಪಿಯ ಮಾಜಿ ಶಾಸಕ ರಾಜೇಶ್ ಮಿಶ್ರಾ ಎಂಬುವವರು 55 ನೇ ವಯಸ್ಸಿನಲ್ಲಿ ಉತ್ತರ ಪ್ರದೇಶ ಮಾಧ್ಯಮಿಕ ಶಿಕ್ಷಣ ಮಂಡಳಿಯು ನಡೆಸಿದ 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ 500 ರಲ್ಲಿ 263 ಅಂಕಗಳನ್ನು ಗಳಿಸಿ ತೇರ್ಗಡೆಯಾಗಿದ್ದಾರೆ.

2017 ರಿಂದ 2022 ರವರೆಗೆ ಅಸೆಂಬ್ಲಿಯಲ್ಲಿ ಬರೇಲಿ ಜಿಲ್ಲೆಯ ಬಿತ್ರಿ-ಚೈನ್‌ಪುರ್ ಸ್ಥಾನವನ್ನು ಪ್ರತಿನಿಧಿಸಿದ್ದ ಮಿಶ್ರಾ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಪಾಸ್ ಆಗಿದ್ದಾರೆ. ಇದೀಗ ಕಾನೂನಿನಲ್ಲಿ ಪದವಿಯನ್ನು ಪಡೆಯಲು ಯೋಜಿಸಿದ್ದಾರೆ. ಆದರೆ, ಪಿಯುಸಿ ಪರೀಕ್ಷೆಯಲ್ಲಿ ಮೂರು ವಿಷಯಗಳಲ್ಲಿ ಗಳಿಸಿದ ಅಂಕಗಳಿಂದ ಅವರು ತೃಪ್ತರಾಗಿಲ್ಲ. ಡ್ರಾಯಿಂಗ್ ಡಿಸೈನ್, ಸಿವಿಕ್ಸ್ ಮತ್ತು ಎಜುಕೇಶನ್ ನಲ್ಲಿ ಬಂದ ಅಂಕಗಳಿಂದ ತೃಪ್ತಿ ಹೊಂದಿಲ್ಲ. ನಾನು ಉತ್ತರ ಪತ್ರಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಮಾಜಿ ಶಾಸಕ ಹಿಂದಿಯಲ್ಲಿ 57, ಸಿವಿಕ್ಸ್‌ನಲ್ಲಿ 47, ಎಜುಕೇಶನ್ ನಲ್ಲಿ 42, ಡ್ರಾಯಿಂಗ್ ಡಿಸೈನ್‌ನಲ್ಲಿ 36 ಮತ್ತು ಸಮಾಜಶಾಸ್ತ್ರದಲ್ಲಿ 81 ಅಂಕಗಳನ್ನು ಪಡೆದಿದ್ದಾರೆ. ಎರಡು ವರ್ಷಗಳ ಹಿಂದೆ, 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರು. ಇದೀಗ ಅವರು 12ನೇ ತರಗತಿ ಪರೀಕ್ಷೆಯಲ್ಲಿಯೂ ಉತ್ತೀರ್ಣರಾಗಿದ್ದಾರೆ. ಇನ್ನು ಎಲ್‌ಎಲ್‌ಬಿಯನ್ನು ಮುಂದುವರಿಸಲು ಬಯಸಿದ್ದು, ಇದರಿಂದ ಬಡವರಿಗೆ ನ್ಯಾಯ ಪಡೆಯಲು ನಾನು ಸಹಾಯ ಮಾಡುತ್ತೇನೆ ಎಂದು ಮಿಶ್ರಾ ತಿಳಿಸಿದ್ದಾರೆ.

ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಉತ್ತಮ ವಕೀಲರ ಸೇವೆಯನ್ನು ಪಡೆಯಲು ಸಾಧ್ಯವಾಗದ ಕಾರಣ ಅವರಿಗೆ ನ್ಯಾಯ ಸಿಗುವುದಿಲ್ಲ ಎಂದು ನಾನು ಶಾಸಕನಿದ್ದಾಗ ಅರಿತುಕೊಂಡೆ. ಬಡವರಿಗೆ ಸೇವೆ ಮಾಡುವ ಉದ್ದೇಶದಿಂದ ವಕೀಲಿ ವೃತ್ತಿ ಮಾಡುವುದಾಗಿ ಅವರು ಹೇಳಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...