ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಏರಿಕೆಯಾಗಿದ್ದು, ದೇಶದೆಲ್ಲೆಡೆ ಆಕ್ಸಿಜನ್ ಕೊರತೆ ಕಂಡು ಬಂದಿದೆ.
ಅಗತ್ಯವಿರುವ ಆಕ್ಸಿಜನ್ ಪೂರೈಕೆಗಾಗಿ ಎಲ್ಲಾ ಕ್ರಮಕೈಗೊಂಡ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ದೇಶದಲ್ಲಿ 551 ಮೆಡಿಕಲ್ ಆಕ್ಸಿಜನ್ ಘಟಕ ಸ್ಥಾಪನೆ ಮಾಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಪಿಎಂ ಕೇರ್ಸ್ ನಿಂದ 551 ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲಾಗುವುದು. ಮೆಡಿಕಲ್ ಆಕ್ಸಿಜನ್ ಕೊರತೆಯಾದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದ್ದು, ಆದಷ್ಟು ಬೇಗ ಆಕ್ಸಿಜನ್ ಘಟಕಗಳು ಕಾರ್ಯಾರಂಭ ಮಾಡಲಿವೆ. ಜಿಲ್ಲಾ ಕೇಂದ್ರಗಳಲ್ಲಿನ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.