ಯಾದಗಿರಿ: ವಸತಿ ಶಾಲೆಯ ಉಪಹಾರದಲ್ಲಿ ಹಾವಿನ ಮರಿ ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಅಬ್ಬೆತುಮಕೂರಿನ ವಿಶ್ವಾರಾದ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ.
ಬೆಳಗಿನ ಉಪಹಾರ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಪತ್ತೆಯಾಗಿದ್ದು, ಉಪ್ಪಿಟ್ಟು ಸೇವಿಸಿದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.