
ಒಂದು ದಿನದಲ್ಲಿ ದೇಶದಲ್ಲಿ 318 ಮಂದಿ ಕೊರೊನಾದಿಂದಾಗಿ ಸಾವಿಗೀಡಾಗಿದ್ದಾರೆ. ಅಲ್ಲದೇ 6906 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. 6317 ಹೊಸ ಕೇಸುಗಳನ್ನು ವರದಿ ಮಾಡುವ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 78,190 ಆಗಿದೆ. ಕಳೆದ 575 ದಿನಗಳಲ್ಲಿ ಇದು ಅತ್ಯಂತ ಕಡಿಮೆ ಸಕ್ರಿಯ ಪ್ರಕರಣವಾಗಿದೆ.
ಇನ್ನು ಕೋವಿಡ್ ಹೊಸ ರೂಪಾಂತರಿಯಾದ ಓಮಿಕ್ರಾನ್ ಬಗ್ಗೆಯೂ ದತ್ತಾಂಶ ನೀಡಿರುವ ಕೇಂದ್ರ ಸಚಿವಾಲಯ ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 213 ಆಗಿದೆ ಎಂದು ಮಾಹಿತಿ ನೀಡಿದೆ. ದೆಹಲಿಯಲ್ಲಿ ಅತೀ ಹೆಚ್ಚು ಅಂದರೆ 57 ಹಾಗೂ ಮಹಾರಾಷ್ಟ್ರದಲ್ಲಿ 54 ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಈವರೆಗೆ ಒಮಿಕ್ರಾನ್ ಸೋಂಕಿಗೆ ತುತ್ತಾದವರಲ್ಲಿ 90 ಮಂದಿ ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ.
ಒಮಿಕ್ರಾನ್ ರೂಪಾಂತರಿಯನ್ನು ಗಮನದಲ್ಲಿರಸಿ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಎಲ್ಲಾ ರೀತಿಯ ತುರ್ತು ಪರಿಸ್ಥಿತಿಗೆ ಸನ್ನದ್ಧರಾಗಿ ಇರುವಂತೆ ಎಚ್ಚರಿಕೆ ನೀಡಿದೆ. ಓಮಿಕ್ರಾನ್ ಅತೀ ವೇಗವಾಗಿ ಹರಡಬಲ್ಲ ರೂಪಾಂತರಿಯಾಗಿರುವ ಹಿನ್ನೆಲೆಯಲ್ಲಿ ಆದಷ್ಟು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.