ಹುಬ್ಬಳ್ಳಿ: ಅಮೃತ್ ಭಾರತ್ ಯೋಜನೆಯಡಿ ಕರ್ನಾಟಕದ 59 ರೈಲು ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ರೈಲ್ವೆ ಇಲಾಖೆಗೆ 2.62 ಲಕ್ಷ ಕೋಟಿ ರೂ. ಮೀಸಲಿಡಲಾಗಿದ್ದು, ಕರ್ನಾಟಕಕ್ಕೆ 7559 ಕೋಟಿ ರೂಪಾಯಿ ಒದಗಿಸಲಾಗಿದೆ. ಇದರಲ್ಲಿ ಕರ್ನಾಟಕದ 59 ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವುದು ಸೇರಿದಂತೆ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ 47 ಸಾವಿರ ಕೋಟಿ ರೂಪಾಯಿ ವೆಚ್ಚದ 31 ಯೋಜನೆಗಳು ಪ್ರಗತಿಯಲ್ಲಿವೆ. 59 ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಅಮೃತ ಭಾರತ ಯೋಜನೆ ಅಡಿ ನಿಲ್ದಾಣಗಳನ್ನು ವಿಶ್ವ ದರ್ಜೆಯ ಮಟ್ಟಕ್ಕೆ ಏರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.