alex Certify ಏ. 2 ರೊಳಗೆ 5, 8, 9ನೇ ತರಗತಿ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏ. 2 ರೊಳಗೆ 5, 8, 9ನೇ ತರಗತಿ ಮೌಲ್ಯಮಾಪನ ಪೂರ್ಣಗೊಳಿಸಿ ಫಲಿತಾಂಶ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಏಪ್ರಿಲ್ 2ರೊಳಗೆ ಪೂರ್ಣಗೊಳಿಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ.

ಮಾರ್ಚ್ 26ರಂದು 5ನೇ ತರಗತಿ ಪರೀಕ್ಷೆಗಳು ಮುಕ್ತಾಯವಾಗಿವೆ. ಮಾರ್ಚ್ 28ರಂದು 8 ಮತ್ತು 9ನೇ ತರಗತಿ ಪರೀಕ್ಷೆಗಳು ಮುಕ್ತಾಯವಾಗಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗ್ ಇನ್ ನಲ್ಲಿ ವಿಷಯವಾರು ಕೀ ಉತ್ತರಗಳನ್ನು ಅಪ್ಲೋಡ್ ಮಾಡಲಾಗಿದೆ.

ಬ್ಲಾಕ್ ಹಂತದಲ್ಲಿ ಅಂತರ ಕ್ಲಸ್ಟರ್ ವಾರು ಮೌಲ್ಯಮಾಪನ ಕಾರ್ಯ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. ಮೌಲ್ಯ ಮಾಪನ ಪೂರ್ಣಗೊಳಿಸಿ ಸಮುದಾಯದತ್ತ ಶಾಲೆ ಕಾರ್ಯಕ್ರಮದ ದಿನದಂದು ಫಲಿತಾಂಶ ಪ್ರಕಟಿಸುವಂತೆ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...