ಬೆಂಗಳೂರು: ರಾಜ್ಯ ಪಠ್ಯಕ್ರಮದ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲಾಗಿದೆ. ಮುಂದಿನ ಶೈಕ್ಷಣಿಕ ಶಾಲೆನಿಂದ ಐದು ಮತ್ತು ಎಂಟನೇ ತರಗತಿಯ ಮುಖ್ಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಿ ಎಸ್ಎಸ್ಎಲ್ಸಿ ಮಾದರಿಯಲ್ಲಿ ಪೂರಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಐದು ಮತ್ತು ಎಂಟನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ಪಡೆದವರಿಗೆ ಎಸ್‌ಎಸ್‌ಎಲ್‌ಸಿ ರೀತಿ ಪೂರಕ ಪರೀಕ್ಷೆಯ ನಡೆಸಿ ಪಾಸ್ ಮಾಡಲು ಚಿಂತನೆ ನಡೆದಿದೆ. ಕಡಿಮೆ ಅಂಕ ಪಡೆದವರಿಗೆ ವಿಶೇಷ ತರಗತಿ ನಡೆಸಲಾಗುವುದು. ನಂತರ ಪೂರಕ ಪರೀಕ್ಷೆ ನಡೆಸಿ, ಫಲಿತಾಂಶ ನೀಡಿ ಮುಂದಿನ ತರಗತಿಗೆ ಬಡ್ತಿ ನೀಡಲಾಗುತ್ತದೆ. ಶಾಲಾ ಶಿಕ್ಷಣದಲ್ಲಿ ಗುಣಮಟ್ಟ ಸುಧಾರಣೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.