alex Certify 5, 8 ,9ನೇ ತರಗತಿ ಪಬ್ಲಿಕ್ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5, 8 ,9ನೇ ತರಗತಿ ಪಬ್ಲಿಕ್ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 5, 8, 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಶುಕ್ರವಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.

ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ 2023 -24ನೇ ಸಾಲಿನ ಸಂಕಲನಾತ್ಮಕ ಮೌಲ್ಯಂಕನ(ಎಸ್ಎ-2) ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಇತ್ತೀಚೆಗೆ ಪ್ರಕಟಿಸಲಾಗಿದ್ದ ತಾತ್ಕಾಲಿಕ ವೇಳಾ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. 2024ರ ಮಾರ್ಚ್ 11 ರಿಂದ 14ರ ವರೆಗೆ ಐದನೇ ತರಗತಿ, ಮಾರ್ಚ್ 11 ರಿಂದ 18ರವರೆಗೆ 8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಗಳು ನಡೆಯಲಿವೆ. ತರಗತಿವಾರು ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ https://kseab.karnataka.com ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿತ್ತು.

5ನೇ ತರಗತಿ

ಮಾರ್ಚ್ 11ರಿಂದ 14 ರವರೆಗೆ ಐದನೇ ತರಗತಿ ಪರೀಕ್ಷೆ ನಡೆಯಲಿದೆ. ಮಾರ್ಚ್ 11 ಪ್ರಥಮ ಭಾಷೆ, ಮಾರ್ಚ್ 12 ದ್ವಿತೀಯ ಭಾಷೆ, ಮಾರ್ಚ್ 13 ಪರಿಸರ ಅಧ್ಯಯನ, ಮಾರ್ಚ್ 14 ಗಣಿತಶಾಸ್ತ್ರ ವಿಷಯದ ಪರೀಕ್ಷೆಗಳು ನಡೆಯಲಿದ್ದು, ಎಲ್ಲಾ ಪರೀಕ್ಷೆಗಳು ಮಧ್ಯಾಹ್ನ 2:30 ರಿಂದ ಸಂಜೆ 4:30ರ ವರೆಗೆ ನಡೆಯಲಿವೆ.

8 ಮತ್ತು 9ನೇ ತರಗತಿ

8 ಮತ್ತು 9ನೇ ತರಗತಿ ಪರೀಕ್ಷೆಗಳು ಮಾರ್ಚ್ 11 ರಿಂದ ಆರಂಭವಾಗಲಿದೆ. ಮಾರ್ಚ್ 11 ಪ್ರಥಮ ಭಾಷೆ, ಮಾರ್ಚ್ 12 ದ್ವಿತೀಯ ಭಾಷೆ, ಮಾರ್ಚ್ 13 ತೃತೀಯ ಭಾಷೆ, ಮಾರ್ಚ್ 14 ಗಣಿತ, ಮಾರ್ಚ್ 15 ರಂದು ವಿಜ್ಞಾನ, ಮಾ. 16ರಂದು ಸಮಾಜ ವಿಜ್ಞಾನ, ಮಾರ್ಚ್ 18ರಂದು ದೈಹಿಕ ಶಿಕ್ಷಣ ಪರೀಕ್ಷೆಗಳು ನಡೆಯಲಿದೆ. ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆಗಳು ನಡೆಯುತ್ತವೆ. ಮಂಡಳಿಯಿಂದಲೇ ಪರೀಕ್ಷೆಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ಕೊಡಲಾಗುವುದು ಎಂದು ಹೇಳಲಾಗಿದೆ.

ಪರೀಕ್ಷೆ ವ್ಯವಸ್ಥೆ ಬದಲಾವಣೆ

5 ಮತ್ತು 8ನೇ ತರಗತಿಗೆ ಮಧ್ಯವಾರ್ಷಿಕ ಪರೀಕ್ಷೆ(SA-1) ಮತ್ತು ಮೌಲ್ಯಂಕನ ಸೇರಿ ಫಲಿತಾಂಶ ನೀಡಬೇಕು ಎಂದು ಹೇಳಲಾಗಿದೆ. 9ನೇ ತರಗತಿಗೆ ಅಂತಿಮ ವಾರ್ಷಿಕ ಪರೀಕ್ಷೆಯಲ್ಲಿನ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಬೇಕೆಂದು ಸೂಚಿಸಲಾಗಿದೆ.

5ನೇ ತರಗತಿ ಬೋರ್ಡ್ ಪರೀಕ್ಷೆಗೆ 2023 -24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಲ್ಲಿನ ನವೆಂಬರ್ ನಿಂದ ಫೆಬ್ರವರಿ 2024 ರವರೆಗಿನ ಪಠ್ಯ ವಸ್ತು ಹಾಗೂ ಎಂಟನೇ ತರಗತಿಗೆ 2023ರ ಜೂನ್ ನಿಂದ ಫೆಬ್ರವರಿ 2024ರ ವರೆಗಿನ ಪಠ್ಯ ವಸ್ತು ಪರಿಗಣಿಸಬೇಕೆಂದು ಸೂಚಿಸಲಾಗಿದೆ.

9ನೇ ತರಗತಿಗೆ ಮೌಲ್ಯಂಕನದಲ್ಲಿ ಪ್ರಥಮ ಭಾಷೆ 100 ಅಂಕ, ದ್ವಿತೀಯ, ತೃತೀಯ ಭಾಷೆ, ಕೋರ್ ವಿಷಯಗಳಿಗೆ 80 ಅಂಕಗಳಂತೆ 500 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಬೇಕು. ಅಂತಿಮವಾಗಿ ಆಂತರಿಕ ಮೌಲ್ಯಮಾಪನದ ಅಂಕ, ಎಸ್ಎ-2 ಬದಲಾಗಿ ನಡೆಸುವ ಮೌಲ್ಯಾಂಕನ ಲಿಖಿತ ಪರೀಕ್ಷೆಯ ಅಂಕಗಳನ್ನು ಪರಿಗಣಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...