alex Certify 6 ಮಿಲಿಯನ್ ವೀಕ್ಷಣೆ ಪಡೆದ ‘ಆಚಾರ್ಯ’ ಚಿತ್ರದ ಲಿರಿಕಲ್ ಸಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

6 ಮಿಲಿಯನ್ ವೀಕ್ಷಣೆ ಪಡೆದ ‘ಆಚಾರ್ಯ’ ಚಿತ್ರದ ಲಿರಿಕಲ್ ಸಾಂಗ್

ಮೆಗಾಸ್ಟಾರ್ ಚಿರಂಜೀವಿ ಹಾಗೂ ಅವರ ಪುತ್ರ ರಾಮ್ ಚರಣ್ ನಟಿಸಿರುವ ‘ಆಚಾರ್ಯ’ ಚಿತ್ರದ ಮತ್ತೊಂದು ಹಾಡು ನಿನ್ನೆ ಆದಿತ್ಯ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು ಈಗಾಗಲೇ 6 ಮಿಲಿಯನ್ ವೀಕ್ಷಣೆ ಪಡೆದಿದೆ. ‘ನೀಲಾಂಬರಿ’ ಎಂಬ ಈ ಹಾಡಿಗೆ ಮಣಿ ಶರ್ಮ ಸಂಗೀತ ಸಂಯೋಜನೆ ನೀಡಿದ್ದಾರೆ.

ಕಪ್ಪು ಕುತ್ತಿಗೆಯಿಂದ ಮುಜುಗರಕ್ಕೆ ಒಳಗಾಗುತ್ತಿದ್ದೀರೇ…..? ಹಾಗಿದ್ದರೆ ಟ್ರೈ ಮಾಡಿ ಈ ಮನೆಮದ್ದು

ಮೆಗಾಸ್ಟಾರ್ ಚಿರಂಜೀವಿಗೆ ಜೋಡಿಯಾಗಿ ಕಾಜಲ್ ಅಗರ್ವಾಲ್ ಅಭಿನಯಿಸಿದ್ದು ರಾಮ್ ಚರಣ್ ಗೆ ಜೋಡಿಯಾಗಿ ಪೂಜಾ ಹೆಗ್ಡೆ ನಟಿಸಿದ್ದಾರೆ. ಸೋನು ಸೂದ್, ಕಿಶೋರ್, ಸೌರವ್ ಲೋಕೇಶ್, ಸಂಗೀತ, ಅಜಯ್, ಸೇರಿದಂತೆ ಹಲವಾರು ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಕೊರಟಾಲ ಶಿವ ನಿರ್ದೇಶನದ ಈ ಚಿತ್ರವನ್ನು ನಿರಂಜನ್ ರೆಡ್ಡಿ ನಿರ್ಮಾಣ ಮಾಡಿದ್ದು, ಫೆಬ್ರವರಿ 4ರಂದು  ತೆರೆಮೇಲೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...