ಭೂಕಂಪನದಿಂದ ತತ್ತರಿಸಿರುವ ಅಫ್ಘಾನಿಸ್ತಾನದಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಭೂಕಂಪನವಾಗಿದೆ. ಅಫ್ಘಾನಿಸ್ತಾನದ ವಾಯುವ್ಯ ಭಾಗದಲ್ಲಿ 6.3 ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ.
ಅಕ್ಟೋಬರ್ 11 ರಂದು ವಾಯುವ್ಯ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್ಜೆಡ್) ತಿಳಿಸಿದೆ. ಭೂಕಂಪನವು 10 ಕಿ.ಮೀ (6.21 ಮೈಲಿ) ಆಳದಲ್ಲಿತ್ತು ಎಂದು ಜಿಎಫ್ಜೆಡ್ ತಿಳಿಸಿದೆ
ಅಕ್ಟೋಬರ್ 7 ರಂದು ಪಶ್ಚಿಮ ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಎರಡು ಭೂಕಂಪಗಳು ಸಾವಿರಾರು ಜನರನ್ನು ಬಲಿ ತೆಗೆದುಕೊಂಡಿವೆ ಎಂದು ದೇಶದ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ ತಿಳಿಸಿದೆ.
ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದ ಸಾವನ್ನಪ್ಪಿದವರ ಸಂಖ್ಯೆ 2,000 ಕ್ಕೆ ಏರಿದೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.