
ಉತ್ತರ ಪ್ರದೇಶದ ಬಂದಾ ಎಂಬಲ್ಲಿ ಅತಿ ವೇಗವಾಗಿ ಬಂದ ಕಾರ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
8 ಜನರಿದ್ದ ಕಾರ್ ಟ್ರಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಮುದಾಯ ಚಿಕಿತ್ಸಾ ಕೇಂದ್ರಕ್ಕೆ ದಾಖಲಾದ 3 ಜನರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದೆ, ಅವರನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬಂದಾ ಡಿಎಂ ದುರ್ಗಾ ಶಕ್ತಿ ನಾಗಪಾಲ್ ತಿಳಿಸಿದ್ದಾರೆ.