alex Certify BREAKING: ಸರ್ಕಾರಿ ಬಸ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸರ್ಕಾರಿ ಬಸ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಸಂಗಮ್-ಕೃಷ್ಣಗಿರಿ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಕಾರ್ ಮತ್ತು ರಾಜ್ಯ ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿ 6 ಜನ ಸಾವನ್ನಪ್ಪಿದ್ದಾರೆ.

ಸೋಮವಾರ ತಡರಾತ್ರಿ ತಿರುವಣ್ಣಾಮಲೈನ ಅಂಧನೂರ್ ಬೈಪಾಸ್ ಬಳಿ ಅಪಘಾತ ಸಂಭವಿಸಿದೆ. ಕಾರ್ ಮತ್ತು ಸರ್ಕಾರಿ ಬಸ್ ನಡುವೆ ಡಿಕ್ಕಿಯಾಗಿದೆ. 10 ಜನರಿದ್ದ ಕಾರ್ ತಿರುವಣ್ಣಾಮಲೈನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಸೆಂಗಂ ಬಳಿ ಸರ್ಕಾರಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಕಾರ್ ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಘಟನೆಯ ಕುರಿತು ಸೆಂಗಂ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...