ಮೈಹಾರ್: ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ನಾದನ್ ದೇಹತ್ ಪೊಲೀಸ್ ಠಾಣೆ ಬಳಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ನಿಂತಿದ್ದ ಕಲ್ಲು ತುಂಬಿದ ಡಂಪರ್ ಟ್ರಕ್ಗೆ ಪ್ರಯಾಗ್ರಾಜ್ನಿಂದ ನಾಗ್ಪುರಕ್ಕೆ ತೆರಳುತ್ತಿದ್ದ ಬಸ್ ಡಿಕ್ಕಿಯಾಗಿದೆ.
ಗಾಯಗೊಂಡವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸತ್ನಾಗೆ ಕಳುಹಿಸಲಾಗಿದೆ ಎಂದು ಮೈಹರ್ನ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರವಾಲ್ ತಿಳಿಸಿದ್ದಾರೆ.
ಉಳಿದವರು ಮೈಹಾರ್ ಮತ್ತು ಅಮರಪತನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ತಕ್ಷಣ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು ಎಂದು ಅಗರವಾಲ್ ಹೇಳಿದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.