
ಪಾಟ್ನಾ: ಬಿಹಾರದ ಮುಜಾಫರ್ಪುರದಲ್ಲಿರುವ ನೂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಪೋಟದ ನಂತರ ಜೀವಹಾನಿ ಆಗಿದ್ದು, ಅನೇಕರು ಗಾಯಗೊಂಡಿದ್ದು, ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆ ಇದೆ. ಅವಘಡದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.