ಚಿಕ್ಕಮಗಳೂರು: ಮೋಸ್ಟ್ ವಾಂಟೆಡ್ 6 ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ. ಕಾಡಿನಲ್ಲಿರುವ ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಕ್ರಿಯೆ ಆರಂಭವಾಗಿದೆ.
ಮುಂಡಗಾರು ಲತಾ, ಸುಂದರಿ ಕಲ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ಕೆ.ವಸಂತ, ಟಿ.ಎನ್.ಜೀಶ್ ಮುಖ್ಯವಾಹಿನಿಗೆ ಬರಲು ಒಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಗುಪ್ತಚರ ಇಲಾಖೆ ಅಧಿಕಾರಿಗಳ ಜೊತೆ ನಕ್ಸಲ್ ಶರಣಾಗತಿ ಸಮಿತಿ, ಶಾಂತಿಗಾಗಿ ನಾಕರಿಕ ವೇದಿಕೆ ಸದಸ್ಯರು ಹಲವು ಸಭೆಗಳನ್ನು ನಡೆಸಿದ್ದು, ಒಂದೆರಡು ದಿನಗಳಲ್ಲೇ ನಕ್ಸಲರು ಶರಣಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಕ್ರಿಯೆಗಳು ಆರಂಭವಾಗಿವೆ.