ಕೊಲ್ಕತ್ತಾ: 6 -7 ಬಿಜೆಪಿ ಸಂಸದರು ಶೀಘ್ರದಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೇರುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜ್ಯೋತಿಪ್ರಿಯ ಮಲ್ಲಿಕ್ ತಿಳಿಸಿದ್ದಾರೆ.
ಉತ್ತರ 24 ಪರಗಣ ಜಿಲ್ಲೆಯ ಹಬ್ರಾದಲ್ಲಿ ಸ್ವಾಮಿ ವಿವೇಕಾನಂದರ 152 ನೇ ಜನ್ಮದಿನಾಚರಣೆ ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದ ಅವರು, ಮೇ ತಿಂಗಳಿಗಿಂತ ಮೊದಲೇ 7 ಮಂದಿ ಸಂಸದರು ಟಿಎಂಸಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಕ್ಷೇತ್ರದ ಶಾಸಕ ಮತ್ತು ಸಚಿವರಾದ ಜ್ಯೋತಿಪ್ರಿಯ ಮಲ್ಲಿಕ್, 7 ಮಂದಿ ಬಿಜೆಪಿ ಸಂಸದರು ಟಿಎಂಸಿಗೆ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗೆ ಬಿಜೆಪಿ ಸೇರಿದ ಸುವೆಂದು ಅಧಿಕಾರಿ ಕೂಡ ಕೆಲವು ದಿನಗಳ ನಂತರ ಪಕ್ಷಕ್ಕೆ ಮರಳಲಿದ್ದಾರೆ ಎಂದು ಹೇಳಿದ್ದಾರೆ.