ಸಂಸದ ಪ್ರತಾಪ್ ಸಿಂಹ ವಿರುದ್ಧ 60 ಕೋಟಿ ರೂ. ಅಕ್ರಮ ಆರೋಪ: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ

ಬೆಂಗಳೂರು: ಮೈಸೂರು -ಬೆಂಗಳೂರು ಎಕ್ಸ್ಪ್ರೆಸ್ ಹೈವೇ ನಿರ್ಮಾಣದಲ್ಲಿ 60 ಕೋಟಿ ರೂ. ನುಂಗಿದ್ದಾರೆ ಎಂಬುದು ಸೇರಿದಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಹಲವು ಆರೋಪ ಮಾಡಿದ ಸಂಬಂಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಲು ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಎಂ. ಲಕ್ಷ್ಮಣ್ ವಿರುದ್ಧ ಮಾನನಷ್ಟ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ ಸಿಂಹ ದಾಖಲಿಸಿದ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಲಕ್ಷ್ಮಣ್ ವಿರುದ್ಧ ಸೂಕ್ತ ಪುರಾವೆಗಳು ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಪ್ರಕ್ರಿಯೆ ಆರಂಭಿಸುವುದು ಸೂಕ್ತವೆನಿಸಿದೆ ಎಂದು ಅಭಿಪ್ರಾಯಪಟ್ಟಿದೆ.

ಲಕ್ಷ್ಮಣ್ ವಿರುದ್ಧ ಐಪಿಸಿ ಸೆಕ್ಷನ್ 499, 500ರ ಅನ್ವಯ ಕ್ರಿಮಿನಲ್ ಪ್ರಕರಣ ದಾಖಲಿಸಲು ತಿಳಿಸಿದ್ದು, ಜೂನ್ 12ರೊಳಗೆ ಲಿಖಿತ ಉತ್ತರ ನೀಡಬೇಕು ಎಂದು ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read