alex Certify ನಾಮಫಲಕಗಳಲ್ಲಿ ಶೇಕಡ 60 ರಷ್ಟು ಕನ್ನಡ ಬಳಕೆ ಕಡ್ಡಾಯ ; ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಮಫಲಕಗಳಲ್ಲಿ ಶೇಕಡ 60 ರಷ್ಟು ಕನ್ನಡ ಬಳಕೆ ಕಡ್ಡಾಯ ; ರಾಜ್ಯ ಸರ್ಕಾರದಿಂದ ಖಡಕ್ ಸೂಚನೆ

ಬೆಂಗಳೂರು : ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ದಿಮೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿದ್ದು, ಇರದಿದ್ದರೆ, ಕ್ರಮ ಜರುಗಿಸುವ ಅಧಿಕಾರ ಸರ್ಕಾರಕ್ಕೆ ಒದಗಿದೆ.

ಈ ಉದ್ದೇಶಕ್ಕೆ, ರಾಜ್ಯ ಸರ್ಕಾರ ಮಂಡಿಸಿ ಉಭಯ ಸದನಗಳಲ್ಲೂ ಅನುಮೋದನೆ ಪಡೆದಿದ್ದ ʼಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ- 2024ʼಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಅದರ ಬೆನ್ನಲ್ಲೇ, ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆಯನ್ನೂ ಹೊರಡಿಸಲಾಗಿದೆ.

ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲ ಸಂಸ್ಥೆಗಳಿಗೂ ಇದು ಅನ್ವಯವಾಗಲಿದೆ. ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೋಟೆಲ್ಗಳ ನಾಮಫಲಕಗಳ ಮೇಲ್ಭಾಗದಲ್ಲಿ ಕನ್ನಡ ಭಾಷೆಯನ್ನು ಶೇಕಡ 60 ರಷ್ಟು ಪ್ರದರ್ಶಿಸಬೇಕು   ಎಂದು ಸರ್ಕಾರ ಸೂಚನೆ ನೀಡಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...