alex Certify ರಾಜ್ಯದಲ್ಲಿ ಮುಂದಿನ ವರ್ಷ ಹೊಸ 600 `ಕರ್ನಾಟಕ ಪಬ್ಲಿಕ್ ಶಾಲೆ’ ಪ್ರಾರಂಭ : ಶಿಕ್ಷಣ ಸಚಿವ ಮಧು ಬಂಗಾರಪ್ಪ|KPS School | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮುಂದಿನ ವರ್ಷ ಹೊಸ 600 `ಕರ್ನಾಟಕ ಪಬ್ಲಿಕ್ ಶಾಲೆ’ ಪ್ರಾರಂಭ : ಶಿಕ್ಷಣ ಸಚಿವ ಮಧು ಬಂಗಾರಪ್ಪ|KPS School

ಮಂಗಳೂರು : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 500-600 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ವರ್ಷ 500-600 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು, ಈ ಶಾಲೆಗಳಲ್ಲಿ 1,500 ಮಕ್ಕಳು ಕಲಿಯಲಿದ್ದಾರೆ. ಇಂಗ್ಲೀಷ್ ಮತ್ತು ಕನ್ನಡ ಮಾಧ್ಯವನ್ನು ಕಲಿಸಿ ಮಕ್ಕಳ ಶಿಕ್ಷಣ ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಮುಂದಿನ ವರ್ಷದಿಂದ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದರು.

ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯಾಗುತ್ತಿದ್ದು, ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಪ್ರಯತ್ನ ನಡೆಯುತ್ತಿದ್ದು, ಶೀಘ್ರವೇ ಇದರ ಬಗ್ಗೆ ಕ್ರಮ ವಹಿಸುತ್ತೇವೆ. ಈಗ ಇರುವ ವ್ಯವಸ್ಥೆಯಲ್ಲಿ ಶಾಲಾ ಮಕ್ಕಳಗಿಎ ಬ್ಯಾಗ್ ತುಂಬಾ ಹೊರೆಯಾಗುತ್ತಿದೆ. ಈಗ ಇರುವ ಭಾರಕ್ಕಿಂತ ಕಡಿಮೆ ಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...