ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ನಲ್ಲಿ ಏಳನೇ ವೇತನ ಆಯೋಗ ಜಾರಿ ಕುರಿತಂತೆ ಯಾವುದೇ ಘೋಷಣೆ ಮಾಡದಿರುವುದು ಹಾಗೂ ಪಿಂಚಣಿ ಯೋಜನೆ ಕುರಿತು ನಿರ್ಧಾರ ಹೊರಬೀಳದಿರುವುದು ಸರ್ಕಾರಿ ನೌಕರರಲ್ಲಿ ನಿರಾಸೆ ಮೂಡಿಸಿದೆ.
ಚುನಾವಣಾ ವರ್ಷವಾಗಿರುವ ಕಾರಣ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬಹುದು ಎಂಬ ಆಶಾ ಭಾವನೆ ಇತ್ತಾದರೂ ಬಜೆಟ್ ಮಂಡನೆ ಬಳಿಕ ಇದು ಹುಸಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಇಂದು ತುರ್ತು ಸಭೆ ಕರೆದಿದೆ.
ಈ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ರೂಪುರೇಷೆ ನಿರ್ಧರಿಸಲಾಗುತ್ತದೆ ಎಂದು ಹೇಳಲಾಗಿದ್ದು, ಜೊತೆಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಹೋರಾಟ ನಡೆಸುತ್ತಿರುವ ಎನ್‌ಪಿಎಸ್ ನೌಕರರ ಜೊತೆ ಕೈಜೋಡಿಸುವ ಸಾಧ್ಯತೆ ಇದೆ.