ಕೆರೆಬಿಯನ್ ರಾಷ್ಟ್ರ ಹೈಟಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ.
ಅವಶೇಷಗಳಡಿ ಸಿಲುಕಿರುವ ಜನರ ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಲಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 7.2 ರಷ್ಟು ದಾಖಲಾಗಿದೆ. ಒಂದು ತಿಂಗಳು ಹೈಟಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಪ್ರಧಾನಿ ಏರಿಯಲ್ ಹೆನ್ರಿ ಒಂದು ತಿಂಗಳು ತುರ್ತು ಪರಿಸ್ಥಿತಿ ಪೋಷಿಸಿದ್ದಾರೆ.
ಭೂಕಂಪದ ತೀವ್ರತೆಗೆ ಭಾರಿ ಸಂಖ್ಯೆಯ ಕಟ್ಟಡಗಳು ಕುಸಿದು ಬಿದ್ದಿವೆ. ಭೂಕಂಪ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗಳಿಗೆ ದಾಖಲಿಸಲಾಗ್ತಿದೆ.