ಮುಂಬೈನಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ 7 ಜನ ಸಚಿವ ದಹನವಾಗಿದ್ದಾರೆ. ಗೋರೆಗಾಂವ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 40ಕ್ಕೆ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗೋರೆಗಾಂವ್ ಪ್ರದೇಶದ 5 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ತಗುಲಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಹಾಗೂ ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.
ಮುಂಬೈನ ಗೋರೆಗಾಂವ್ ನ ಕಟ್ಟಡವೊಂದರಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ 7 ಜನ ಸಾವನ್ನಪ್ಪಿದ್ದಾರೆ. 40 ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 3 ಗಂಟೆಗೆ ಈ ಘಟನೆ ನಡೆದಿದೆ. ಹಲವಾರು ದ್ವಿಚಕ್ರ ವಾಹನಗಳು ಮತ್ತು ಕಾರ್ ಗಳು ಸಹ ಬೆಂಕಿಗೆ ಆಹುತಿಯಾಗಿವೆ. ಕಟ್ಟಡದಲ್ಲಿ ಅಗ್ನಿಶಾಮಕದಳದಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
5 ಅಂತಸ್ತಿನ ಕಟ್ಟಡದ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಕಟ್ಟಡಕ್ಕೆ ವ್ಯಾಪಿಸಿದೆ. ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ ಕೂಡಲೇ ಅಗ್ನಿಶಾಮಕ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನಂತರ ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ತಂಪಾಗಿಸುವ ಪ್ರಯತ್ನಗಳು ನಡೆಯುತ್ತಿವೆ. ಸ್ಥಳೀಯರ ಪ್ರಕಾರ, ಪಾರ್ಕಿಂಗ್ ಪ್ರದೇಶದಲ್ಲಿ ಬಿದ್ದಿದ್ದ ಬಟ್ಟೆಗೆ ಬೆಂಕಿ ಹೊತ್ತಿಕೊಂಡಿತು, ನಂತರ ಬೆಂಕಿ ಇಡೀ ಪ್ರದೇಶಕ್ಕೆ ವ್ಯಾಪಿಸಿದೆ. ಏತನ್ಮಧ್ಯೆ, ಬೆಂಕಿಯ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.