ಬೆಂಗಳೂರು : ನಮ್ಮ ಸರ್ಕಾರ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬರದ ಸಂಕಷ್ಟದ ನಡುವೆಯೂ ರೈತರ ಕೃಷಿ ಪಂಪ್ಸೆಟ್ಗಳಿಗೆ 7 ಗಂಟೆಗಳ ವಿದ್ಯುತ್ ಪೂರೈಕೆ ಮಾಡುವ ಮೂಲಕ ನಮ್ಮ ಸರ್ಕಾರವು ನಾಡಿನ ರೈತರ ಹಿತ ಕಾಪಾಡಿದೆ. ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.