alex Certify ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 7 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 7 ಜನ ಸಾವು

ಕೊರ್ಬಾ: ಛತ್ತೀಸ್‌ ಗಢದ ಕೊರ್ಬಾ ಜಿಲ್ಲೆಯಲ್ಲಿ ಸೋಮವಾರ ನಿಂತಿದ್ದ ಟ್ರಕ್‌ ಗೆ ಬಸ್ ಡಿಕ್ಕಿ ಹೊಡೆದು 7 ಜನರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್ ರಾಜ್ಯ ರಾಜಧಾನಿ ರಾಯ್‌ ಪುರದಿಂದ ಸುರ್ಗುಜಾ ಜಿಲ್ಲೆಗೆ ತೆರಳುತ್ತಿದ್ದಾಗ ಮುಂಜಾನೆ 4 ಗಂಟೆ ಸುಮಾರಿಗೆ ಬಂಗೋ ಪೊಲೀಸ್ ಠಾಣೆ ವ್ಯಾಪ್ತಿಯ ಮದಾಯಿ ಘಾಟ್ ಬಳಿ ಅಪಘಾತ ಸಂಭವಿಸಿದೆ ಎಂದು ಕೊರ್ಬಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಸಿಂಗ್ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ ಬಸ್ ಚಾಲಕ ಎದುರಿನಿಂದ ಬರುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ್ದು, ನಿಯಂತ್ರಣ ತಪ್ಪಿದ ಬಸ್ ನಿಂತಿದ್ದ ಟ್ರಕ್‌ ಗೆ ಡಿಕ್ಕಿ ಹೊಡೆದಿದೆ. 7 ಮಂದಿ ಬಸ್‌ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಇಲ್ಲಿನ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...