alex Certify ಇರಾನ್ ನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ: 7 ಜನ ಸಾವು, 400 ಕ್ಕೂ ಹೆಚ್ಚು ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇರಾನ್ ನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ: 7 ಜನ ಸಾವು, 400 ಕ್ಕೂ ಹೆಚ್ಚು ಮಂದಿಗೆ ಗಾಯ

ಇರಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಪ್ರಾಥಮಿಕ ಮಾಹಿತಿಗಳ ಪ್ರಕಾರ 7 ಜನ ಸಾವನ್ನಪ್ಪಿದ್ದಾರೆ. ರಿಕ್ಟರ್ ಮಾಪಕದಲ್ಲಿ 5.9 ರ ತೀವ್ರತೆಯ ಭೂಕಂಪವು ವಾಯುವ್ಯ ಇರಾನ್‌ ಗೆ ಅಪ್ಪಳಿಸಿದೆ.

ಇದುವರೆಗೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 440 ಜನರು ಗಾಯಗೊಂಡಿದ್ದಾರೆ. ಇರಾನ್-ಟರ್ಕಿ ಗಡಿಯ ಸಮೀಪವಿರುವ ಖೋಯ್ ನಗರದಲ್ಲಿ ಶನಿವಾರ ರಾತ್ರಿ 9:44 ಕ್ಕೆ(ಸ್ಥಳೀಯ ಕಾಲಮಾನ) ಭೂಕಂಪ ಸಂಭವಿಸಿದೆ.

ಕಂಪನಗಳು ಸಾಕಷ್ಟು ಪ್ರಬಲವಾಗಿವೆ ಎಂದು ವರದಿಯಾಗಿದೆ ಮತ್ತು ಇರಾನ್‌ನ ಪಶ್ಚಿಮ ಅಜೆರ್ಬೈಜಾನ್ ಪ್ರಾಂತ್ಯದ ಹಲವು ಪ್ರದೇಶಗಳಲ್ಲಿ ಕಂಪನದ ಅನುಭವವಾಯಿತು. ನೆರೆಯ ಪೂರ್ವ ಅಜೆರ್‌ಬೈಜಾನ್‌ ನ ಪ್ರಾಂತೀಯ ರಾಜಧಾನಿಯಾದ ತಬ್ರಿಜ್ ಸೇರಿದಂತೆ ಹಲವಾರು ನಗರಗಳಲ್ಲಿಯೂ ಭೂಮಿ ಕಂಪಿಸಿದೆ.

ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ(USGS) ಪ್ರಕಾರ ಭೂಕಂಪವು 23:44:44 (UTC+05:30) ಕ್ಕೆ ಸಂಭವಿಸಿದೆ. ಮತ್ತು 10 ಕಿಮೀ ಆಳದಲ್ಲಿ ಖೋಯ್‌ನಿಂದ 14 ಕಿಮೀ ದಕ್ಷಿಣ-ನೈಋತ್ಯಕ್ಕೆ ಅಪ್ಪಳಿಸಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...