ಗುಜರಾತ್ ಸೂರತ್ ನಲ್ಲಿ ಶನಿವಾರ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳದಿಂದ ಪೊಲೀಸರು ಡೆತ್ ನೋಟ್ ಸಹ ವಶಪಡಿಸಿಕೊಂಡಿದ್ದಾರೆ.
ಮೇಲ್ನೋಟಕ್ಕೆ, ಕುಟುಂಬವು ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಹೇಳಲಾಗಿದೆ. ಘಟನೆಯ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.’
ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಸೂರತ್ ಡಿಸಿಪಿ ರಾಕೇಶ್ ಬರೋಟ್, “ಒಂದೇ ಕುಟುಂಬದ ಏಳು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಆತ್ಮಹತ್ಯೆ ಪತ್ರವನ್ನು ಬರೆದಿದ್ದಾರೆ ಮತ್ತು ಕೊಲೆಗೆ ನಿಖರ ಕಾರಣ ಹುಡುಕುತ್ತಿದ್ದೇವೆ ಎಂದು ಹೇಳಿದ್ದಾರೆ.