alex Certify Shocking News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ನಿವೃತ್ತ ಸಬ್ ಇನ್ಸ್ ಪೆಕ್ಟರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking News: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ನಿವೃತ್ತ ಸಬ್ ಇನ್ಸ್ ಪೆಕ್ಟರ್ ಅರೆಸ್ಟ್

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ನಿವೃತ್ತ ಸಬ್ ಇನ್ಸ್ ಪೆಕ್ಟರ್ ಓರ್ವರನ್ನು ಬೆಂಗಳೂರಿನ ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.

74 ವರ್ಷದ ಆರೋಪಿ ಶಿವಾಜಿನಗರದಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿದ್ದ. ತಾನಿದ್ದ ಕಟ್ಟದಲ್ಲಿಯೇ ಇದ್ದ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು. ಭಾನುವಾರ ಈ ಘಟನೆ ನಡೆದಿದ್ದು, ಬಾಲಕಿ ನೋವಿನಿಂದ ಬಳಲುತ್ತಿದ್ದಾಗ ಆಕೆಯ ಪೋಷಕರು ವಿಚಾರಿಸಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ ಪೋಷಕರು, ಶಿವಾಜಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...