alex Certify BIG NEWS: ಡಿಪ್ಲೋಮೋ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ 70 ವರ್ಷದ ವೃದ್ಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಪ್ಲೋಮೋ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ 70 ವರ್ಷದ ವೃದ್ಧ

ಡಿಪ್ಲೋಮಾ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 70 ವರ್ಷದ ವೃದ್ಧರೊಬ್ಬರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ಈ ಮೂಲಕ ಕಲಿಕೆಗೆ ವಯಸ್ಸಿನ ಯಾವುದೇ ಹಂಗಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯ ನಾರಾಯಣ ಎಸ್. ಭಟ್ ಎಂಬವರೇ ಈ ಸಾಧನೆ ಮಾಡಿದವರಾಗಿದ್ದಾರೆ.

ಮೂಲತಃ ಶಿರಸಿ ತಾಲೂಕಿನ ಸುಗಾವಿ ಗ್ರಾಮದ ನಾರಾಯಣ ಭಟ್ 1973 ರಲ್ಲಿಯೇ ಮೆಕ್ಯಾನಿಕಲ್ ಡಿಪ್ಲೋಮಾ ಎಂಜಿನಿಯರಿಂಗ್ ಪದವಿ ಪಡೆದಿದ್ದು, ದೇಶದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸಿದ್ದರು. 2013ರಲ್ಲಿ ನಿವೃತ್ತಿಯಾದ ಬಳಿಕ ಶಿರಸಿಗೆ ಮರಳಿದ್ದ ಅವರಿಗೆ ಮತ್ತೆ ವ್ಯಾಸಂಗ ಮುಂದುವರಿಸಬೇಕೆಂಬ ಹಂಬಲ ಉಂಟಾಗಿದೆ.

ಆದರೆ ಇವರ ಪ್ರವೇಶಾತಿಗೆ ಕೆಲವೊಂದು ತಾಂತ್ರಿಕ ಅಡಚಣೆ ಎದುರಾಗಿದ್ದ ಕಾರಣ ಅಂತಿಮವಾಗಿ 2019 ರಲ್ಲಿ ಶಿರಸಿಯ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಿವಿಲ್ ಡಿಪ್ಲೋಮಾ ಎಂಜಿನಿಯರಿಂಗ್ ಗೆ ಪ್ರವೇಶ ಪಡೆದಿದ್ದರು. ಇದೀಗ ಅಂತಿಮ ವರ್ಷದ ಪರೀಕ್ಷಾ ಪಲಿತಾಂಶ ಹೊರ ಬಿದ್ದಿದ್ದು, ಶೇಕಡಾ 94 ರಷ್ಟು ಅಂಕ ಗಳಿಕೆಯೊಂದಿಗೆ ರಾಜ್ಯದಲ್ಲೇ ಹೆಚ್ಚು ಅಂಕ ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...