alex Certify ಸತತ 3 ವರ್ಷದಿಂದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ್ದ 71ರ ವೃದ್ಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸತತ 3 ವರ್ಷದಿಂದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ್ದ 71ರ ವೃದ್ಧ

ತಮಿಳುನಾಡಿನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 71 ವರ್ಷದ ವೃದ್ಧನೊಬ್ಬ ನಾಚಕೆಗೇಡಿ ಕೆಲಸ ಮಾಡಿದ್ದಾನೆ. ಮೊಮ್ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾನೆ. 15 ವರ್ಷದ ಮೊಮ್ಮಗಳ ಮೇಲೆ ಸತತ 3 ವರ್ಷಗಳಿಂದ ಪಾಪಿ ಅತ್ಯಾಚಾರ ನಡೆಸುತ್ತಿದ್ದ ಎನ್ನಲಾಗಿದೆ. ಅಪ್ರಾಪ್ತೆ ಗರ್ಭ ಧರಿಸಿದಾಗ ವಿಷ್ಯ ಬಹಿರಂಗವಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಾಲಿಕುರುಚಿ ಜಿಲ್ಲೆಯ ತಿರುಕೋಯಿಲೂರಿನಲ್ಲಿ ಘಟನೆ ನಡೆದಿದೆ. ಅಪ್ರಾಪ್ತೆ ಹಾಗೂ ಆಕೆ ಸಹೋದರ, ಅಜ್ಜನ ಜೊತೆ ವಾಸವಾಗಿದ್ದರು. ಮನೆಯಲ್ಲಿ ಯಾರೂ ಇರದ ಕಾರಣ ಪಾಪಿ ತನ್ನ ಆಸೆ ತೀರಿಸಿಕೊಂಡಿದ್ದಾರೆ. ಅಪ್ತಾಪ್ತೆಗೆ ಗರ್ಭಪಾತ ಮಾಡಲಾಗಿದೆ. ಸ್ಥಳೀಯರು ಈ ವಿಷ್ಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಸೂಕ್ತ ಮಾಹಿತಿ ಮೇರೆಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದರು. ಅಪ್ರಾಪ್ತೆ ಗರ್ಭಪಾತಕ್ಕೆ ಸಹಾಯ ಮಾಡಿದ ಇಬ್ಬರು ಮಹಿಳೆಯರನ್ನೂ ಪೊಲೀಸರು ಬಂಧಿಸಿದ್ದಾರೆ.

ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಅಪ್ರಾಪ್ತೆ ಪಾಲಕರ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...