alex Certify ಸಿಡಿಲಿಗೆ ಬರೋಬ್ಬರಿ 74 ಮಂದಿ ಬಲಿ: ಪರಿಹಾರ ಘೋಷಿಸಿದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿಲಿಗೆ ಬರೋಬ್ಬರಿ 74 ಮಂದಿ ಬಲಿ: ಪರಿಹಾರ ಘೋಷಿಸಿದ ಮೋದಿ

ನವದೆಹಲಿ: ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಸಿಡಿಲಿಗೆ ಬರೋಬ್ಬರಿ 74 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಸಿಡಿಲಿನಿಂದ 41 ಮಂದಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದಲ್ಲಿ 20 ಮತ್ತು ಮಧ್ಯಪ್ರದೇಶದಲ್ಲಿ 11 ಮಂದಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಭಾನುವಾರ ರಾಜಸ್ಥಾನದಲ್ಲಿ ಸಂಭವಿಸಿದ ಸಿಡಿಲು ದುರಂತದಲ್ಲಿ ಅಂಬರ್ ಕೋಟೆಯ ಬಳಿ ಬೆಟ್ಟದ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದ 11 ಮಂದಿ ಸಾವನ್ನಪ್ಪಿದ್ದಾರೆ. 8 ಮಂದಿ ಗಾಯಗೊಂಡಿದ್ದಾರೆ ಎಂದು ಜೈಪುರದ ಹಿರಿಯ ಪೊಲೀಸ್ ಅಧಿಕಾರಿ ಆನಂದ್ ಶ್ರೀವಾಸ್ತವ್ ತಿಳಿಸಿದ್ದಾರೆ. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಘೋಷಿಸಿದ್ದಾರೆ.

ಪಿಎಂಒ ಕಚೇರಿ ನೀಡಿರುವ ಮಾಹಿತಿಯಂತೆ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ 50 ಸಾವಿರ ರೂಪಾಯಿ ನೆರವು ನೀಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...