ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 754 ಮಂದಿ ವಿದೇಶಿ ವೀಸಾ ಅವಧಿ ಮುಗಿದವರು ಅಕ್ರಮವಾಗಿ ವಾಸ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಡಾ.ಜಿ.ಪರಮೇಶ್ವರ್, ಕರ್ನಾಟಕದಲ್ಲಿ 2023 ರ ಮೇ ಅಂತ್ಯಕ್ಕೆ 8,862 ಮಂದಿ ವಿದೇಶ ಪಡೆದವರು ವಾಸಿಸುತ್ತಿದ್ದು, ಈ ಪೈಕಿ 754 ಮಂದಿ ವಿದೇಶಿಯರು ವೀಸಾ ಅವಧಿ ಮುಗಿದರೂ ಇಲ್ಲೇ ನೆಲೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಪತ್ತೆ ತಂಡಗಳನ್ನು ರಚಿಸಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಅವಧಿ ಮೀರಿ ವಾಸವಾಗಿರುವ ವಿದೇಶಿ ಪ್ರಜೆಗಳನ್ನು ಅವರ ದೇಶದ ವಿದೇಶ ಮಂತ್ರಾಲಯಕ್ಕೆ ಮಾಹಿತಿ ನೀಡಲಾಗುತ್ತದೆ. ಅಲ್ಲಿಯವರೆಗೆ ಅವರನ್ನು ಡಿಟೆನ್ಷನ್ ಸೆಂಟರ್ ನಲ್ಲಿ ಇಡಲಾಗುತ್ತದೆ ಎಂದರು.