ಬೆಂಗಳೂರು: ಸಂವಿಧಾನ ಜಾರಿಗೆ ಬಂದ 75ನೇ ವರ್ಷಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.
ಸಮಾವೇಶದಲ್ಲಿ ಭಾಗವಹಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸಮಾವೇಶದ ಮೂಲಕ ಸಂವಿಧಾನದ ಮಹತ್ವ ಸಾರುವ ಪ್ರಯತ್ನ ನಡೆಸಾಗಲಾಗುವುದು. ಎಲ್ಲಾ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.