ಬೆಂಗಳೂರು: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಡಗರ-ಸಂಭ್ರಮ ಮನೆ ಮಾಡಿದೆ. ನಾಡಿನ ಜನತೆಗೆ ಗಣರಾಜ್ಯೋತ್ಸವದ ಶುಭಾಷಯ ಕೋರಿರುವ ಸಿಎಂ ಸಿದ್ದರಾಮಯ್ಯ, ಮಹತ್ವದ ಸಂದೇಶ ನೀಡಿದ್ದಾರೆ.
ಈ ವಾರದಲ್ಲಿ ಬೆಳೆ ಪರಿಹಾರದ ಒದಲ ಕಂತು ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈಗಾಗಲೇ ಬೆಳೆ ಪರಿಹಾರ 2000 ರೂಪಾಯಿ ಘೋಷಣೆ ಮಾಡಲಾಗಿದ್ದು, 550 ಕೋಟಿ ರೈತರ ಖಾತೆಗೆ ಜಮೆ ಆಗಿದೆ. ಈ ವಾರದಲ್ಲಿ ಮೊದಲ ಕಂತಿನ ಹಣ ತಲುಪಲಿದೆ ಎಂದು ತಿಳಿಸಿದ್ದಾರೆ.
ರೈತರು ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳ ಅಸಲು ಪಾವತಿಸಿದಲ್ಲಿ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ಆದೇಶ ಹೊರಡಿಸಿದೆ. ಕೊಬ್ಬರಿ ಬೆಲೆ ಕುಸಿತಗೊಂಡು ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 1500 ರೂಗಳ ನೆರವನ್ನು ರಾಜ್ಯ ಸರ್ಕಾರವೆ ನೀಡುತ್ತಿದೆ.
ನೆಟೆ ರೋಗದಿಂದ ಬಾಧಿತರಾದ ತೊಗರಿ ಬೆಳೆಗಾರರಿಗೆ 223 ಕೋಟಿ ರೂ ಪರಿಹಾರ ನೀಡಿದ್ದೇವೆ. ಬಿತ್ತನೆ ವೈಫಲ್ಯ, ಮಧ್ಯಂತರ ಬೆಳೆ ಪರಿಹಾರ ವಿಮೆ ಮತ್ತು ಸ್ಥಳ ನಿರ್ಧಿಷ್ಠ ವಿಕೋಪಗಳಿಗೆ ಪರಿಹಾರವಾಗಿ 8.10 ಲಕ್ಷ ರೈತರಿಗೆ 591 ಕೋಟಿ ರೂಪಾಯಿಗಳನ್ನು ನೀಡಿದ್ದೇವೆ. ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.